https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಹೊಸಪೇಟೆ
ವಿಶ್ವಗುರು ಶ್ರೀ ಬಸವೇಶ್ವರ ಅಶ್ವಾರೂಢ ಪುತ್ಥಳಿ ಮತ್ತು ವೃತ್ತ ಲೋಕಾರ್ಪಣ ಸಮಾರಂಭ ನ.22 ರಂದು ಬೆಳಿಗ್ಗೆ 10 ಕ್ಕೆ ರಿಂಗ್ ರಸ್ತೆಯ ಸಿದ್ದಿಪ್ರಿಯಾ ಕಲ್ಯಾಣ ಮಂಟಪದ ಮುಂಭಾಗದ ಶ್ರೀ ಬಸವೇಶ್ವರ ವೃತ್ತದಲ್ಲಿ ಜರುಗಲಿದೆ ಎಂದು ಹೊಸಪೇಟೆ ತಾಲೂಕು ವೀರಶೈವ ಲಿಂಗಾಯತ ಸಮಾಜ ತಿಳಿಸಿದೆ.
ಹಂಪಿ ಹೇಮಕೂಟ ಶೂನ್ಯ ಸಿಂಹಾಸನಾಧೀಶ್ವರ ಜಗದ್ಗುರು ಕೊಟ್ಟೂರುಸ್ವಾಮಿ ಸಂಸ್ಥಾನಮಠದ ಹತ್ತೊಂಬತ್ತನೆ ಪೀಠಾಧಿಪತಿಗಳಾದ ಶ್ರೀ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳವರ ಪಟ್ಟಾಧಿಕಾರ ಸುವರ್ಣ ಮಹೋತ್ಸವ ಸ್ಮರಣಾರ್ಥ ವಿಜಯನಗರ ಜಿಲ್ಲಾ ಕೇಂದ್ರದಲ್ಲಿ ಲೋಕಾರ್ಪಣಗೊಳ್ಳಲಿದೆ.
ಜಗದ್ಗುರು ಶ್ರೀ ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು ಮತ್ತು ವಳ್ಳಬಳ್ಳಾರಿಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯವಹಿಸುವರು.
ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಲಿದ್ದಾರೆ. ವಸತಿ ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಉಪಸ್ಥಿತರಿರಲಿದ್ದಾರೆ. ಶಾಸಕ ಎಚ್.ಆರ್.ಗವಿಯಪ್ಪ ಅಧ್ಯಕ್ಷತೆವಹಿಸುವರು. ಮಾಜಿ ಸಚಿವ ಆನಂದಸಿಂಗ್, ಶಾಸಕ ವಿನಯ ಕುಲಕರ್ಣಿ, ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಶಾಸಕರಾದ ಲತಾ ಮಲ್ಲಿಕಾರ್ಜುನ, ಕೆ.ನೇಮಿರಾಜ ನಾಯ್ಕ, ಡಾ.ಎನ್.ಟಿ.ಶ್ರೀನಿವಾಸ, ಕೃಷ್ಣ ನಾಯ್ಕ್.ಎಲ್, ವಿಧಾನಪರಿಷತ್ ಸದಸ್ಯ ವೈ.ಸತೀಶ್ ರೆಡ್ಡಿ, ಮಾಜಿ ಸಚಿವ ಹಾಲಪ್ಪ ಆಚಾರ್, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಬಳ್ಳಾರಿ ವೀರಶೈವ ವಿದ್ಯಾವರ್ದಕ ಸಂಘದ ಅಧ್ಯಕ್ಷ ಆರ್.ರಾಮನಗೌಡ್ರು, ಕಾರ್ಯದರ್ಶಿ ಎಚ್.ಎಂ.ಗುರುಸಿದ್ದಸ್ವಾಮಿ, ಕೋಶಾಧ್ಯಕ್ಷ ಗೋನಾಳ ರಾಜಶೇಖರಗೌಡ್ರು, ನಗರಸಭೆ ಅಧ್ಯಕ್ಷೆ ಎ.ಲತಾ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದೆ.
More Stories
ಜನರು ಧಂಗೆ ಏಳುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಿ , ಸುಳ್ಳು ದೂರು ನೀಡಿದಲ್ಲಿ 3 ವರ್ಷ ಜೈಲು: ಉಪ ಲೋಕಾಯುಕ್ತ ಬಿ.ವೀರಪ್ಪ
ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿ….ಜಯ ನಿಮ್ಮದೇ….
ದಾಖಲೆ ವಹಿವಾಟು ನಡೆಸಿದ ಕೊಪ್ಪಳ ಹಣ್ಣು ಮತ್ತು ಜೇನು ಮೇಳ