November 7, 2024

Hampi times

Kannada News Portal from Vijayanagara

ಹಂಪಿ ಉತ್ಸವ 2024 ಸಿದ್ಧತೆ ಆರಂಭ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

 

https://youtu.be/NHc6OMSu0K4?si=SI_K4goOPEgwo6h2

 

 

ಹಂಪಿ ಟೈಮ್ಸ್ ಹೊಸಪೇಟೆ: 
ಹಂಪಿ ಉತ್ಸವಕ್ಕೆ ದಿನಗಣನೆ ಆರಂಭವಾದ ಬೆನ್ನಲ್ಲೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಂಗಳವಾರ ಹಂಪಿಯಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಹಂಪಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಿಲು ತೀರ್ಮಾನಿಸಲಾಗಿದೆ. ವಿಜಯನಗರ ವೈಭವವನ್ನು ಪ್ರತಿಬಿಂಬಿಸುವ ತುಂಗಾ ಆರತಿ, ಹಂಪಿ ಬೈಸ್ಕೈ, ಹಂಪಿ ಬೈ ನೈಟ್ ಈಬಾರಿಯೂ ಆಯೋಜಿಸಲಾಗುವುದು. ಉತ್ಸವದಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತದೆ. ಕುಸ್ತಿ ಸ್ಪರ್ಧೆ, ಮೆಹಂದಿ, ರಂಗೊಲಿ ಸ್ಪರ್ಧೆ, ಕರಕುಶಲ ವಸ್ತುಗಳ ಪ್ರದರ್ಶನ, ಫಲಪುಷ್ಪ ಪ್ರದರ್ಶನ, ದೇಸಿ ಆಹಾರ, ಶಿಲ್ಪಕಲಾ ಶಿಬಿರ, ಚಿತ್ರಕಲಾ ಶಿಬಿರ, ಫೋಟೋ ಸ್ಪರ್ಧೆ, ಮಹಿಳೆಯರಿಗೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳ ಜತೆಯಲ್ಲಿ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಗತ್ಯ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಬಾರಿ ನಾಲ್ಕು ವೇದಿಕೆಗಳನ್ನು ನಿರ್ಮಿಸಲಾಗುವುದು. ಗಾತ್ರಿಪೀಠ ವೇದಿಕೆ, ಎದುರು ಬಸವಣ್ಣ ಮಂಟಪ. ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ, ಸಾಸಿವೆಕಾಳು ಗಣಪತಿ ಸ್ಮಾರಕ, ಆನೆಲಾಯ ಸ್ಮಾರಕ ಹಾಗೂ ಈ ಹಿಂದೆ ನಡೆದಿದ್ದ ಕಾರ್ಯಕ್ರಮಗಳ ಸ್ಥಳಗಳಿಗೆ ಭೇಟಿ ನೀಡಿದರು. ಅದ್ಧೂರಿ ಹಂಪಿ ಉತ್ಸವಕ್ಕೆ ಏನೂ ಕೊರತೆಯಾಗದಂತೆ ನಿಗಾವಹಿಸಬೇಕು. ಗೊಂದಲಗಳಿದ್ದರೆ ಕೂಡಲೇ ಮಾತನಾಡಿ ಪರಿಹಾರ ಕಂಡುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಫೆ.2,3 ಮತ್ತು 4 ರಂದು ನಡೆಯುವ ಹಂಪಿ ಉತ್ಸವಕ್ಕೆ ಸಾರಿಗೆ ನಿಲುಗಡೆಗೆ ಅಗತ್ಯ ಪಾರ್ಕಿಂಗ್ ಸ್ಥಳಗಳ ಪರಿಶೀಲನೆ ನಡೆಯಿತು.

ಎಸ್ಪಿ ಬಿ.ಎಲ್.ಶ್ರೀಹರಿಬಾಬು, ಅಪರಜಿಲ್ಲಾಧಿಕಾರಿ ಜಿ.ಅನುರಾಧ, ಸಹಾಯಕ ಆಯುಕ್ತ ಎನ್.ಮೊಹಮ್ಮದ್ ಅಲಿ ಅಕ್ರಂ ಶಾ, ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದುಗಲ್ ಇತರರಿದ್ದರು.

 

 

ಜಾಹೀರಾತು
error: Content is protected !!