https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಹೊಸಪೇಟೆ
ಕನ್ನಡ ವಿಶ್ವವಿದ್ಯಾಲಯದಿಂದ ಪ್ರದಾನ ಮಾಡುವ ನಾಡೋಜ ಪದವಿಗೆ ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರು ಸಾಧಕರನ್ನು ಆಯ್ಕೆ ಮಾಡಲಾಗಿದೆ. ಜ.10 ರಂದು ನಡೆಯುವ 32ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ತಿಳಿಸಿದರು.
ಕನ್ನಡ ವಿಶ್ವವಿದ್ಯಾಲಯದ ಮಂಟಪ ಸಭಾಂಗಣದ ಸಿಂಡಿಕೇಟ್ ಹಾಲ್‌ನಲ್ಲಿ ಶುಕ್ರವಾರ 32ನೇ ನುಡಿಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದರು. ಸಮಾಜ ಸೇವೆಯಲ್ಲಿನ ಸಾಧನೆಗಾಗಿ ಬೀದರ್ ಜಿಲ್ಲೆಯ ಭಾಲ್ಕಿ ಹಿರೇಮಠದ ಡಾ. ಬಸವಲಿಂಗ ಪಟ್ಟದೇವರು, ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಆಂಧ್ರಪ್ರದೇಶದ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಡಾ. ತೇಜಸ್ವಿ ವಿ. ಕಟ್ಟಿಮನಿ, ಮತ್ತು ವಿಜ್ಞಾನ ಕ್ಷೇತ್ರದಲ್ಲಿನ ನ್ಯಾನೋ ಟೆಕ್ನಾಲಜಿ ವಿದ್ವಾಂಸರು ಹಾಗೂ ನ್ಯಾಕ್ ಸಂಸ್ಥೆಯ ಮಾಜಿ ನಿರ್ದೇಶಕರಾದ ಡಾ.ಎಸ್.ಸಿ. ಶರ್ಮಾ ಅವರನ್ನು ಕನ್ನಡ ವಿಶ್ವವಿದ್ಯಾಲಯದ ಪ್ರತಿಷ್ಠಿತ ನಾಡೋಜ ಪದವಿಗೆ ಆಯ್ಕೆ ಮಾಡಲಾಗಿದೆ.
32ನೇ ನುಡಿಹಬ್ಬ ಕಾರ್ಯಕ್ರಮದಲ್ಲಿ ಅನಂತಪುರಂನ ಆಂಧ್ರ ಪ್ರದೇಶ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ಎ ಕೋರಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವರು ಮತ್ತು ಸಮಕುಲಾಧಿಪತಿಗಳೂ ಆಗಿರುವ ಡಾ.ಎಂ.ಸಿ. ಸುಧಾಕರ್ ಡಿ.ಲಿಟ್. ಹಾಗೂ ಪಿಎಚ್.ಡಿ ಪದವಿಗಳನ್ನು ಪ್ರದಾನ ಮಾಡಲಿದ್ದಾರೆ. ಈ ಬಾರಿಯ ಘಟಿಕೋತ್ಸವದಲ್ಲಿ 1 ಡಿ.ಲಿಟ್ ಹಾಗೂ 246 ಕ್ಕೂ ಹೆಚ್ಚು ಸಂಶೋಧನಾರ್ಥಿಗಳು ಪಿಎಚ್‌ಡಿ ಪದವಿ ಪಡೆಯಲಿದ್ದು, ಇದು ಕನ್ನಡ ವಿಶ್ವವಿದ್ಯಾಲಯದ ಇತಿಹಾಸದಲ್ಲೇ ದಾಖಲೆ. ಅತಿ ಕಡಿಮೆ ಸಂಖ್ಯೆಯಿರುವ ಕೇರಳದ ಪಣಿಯನ್ ಬುಡಕಟ್ಟು ಸಮುದಾಯದ ಕುರಿತು ಸಂಶೋಧನೆಯನ್ನು ಅದೇ ಸಮುದಾಯದ ವಿದ್ಯಾರ್ಥಿನಿ ಕುಮಾರಿ ದಿವ್ಯ ಸಮಾಜಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಪಿಎಚ್.ಡಿ ಪಡೆಯಲಿದ್ದು, ಇದು ಕನ್ನಡ ವಿಶ್ವವಿದ್ಯಾಲಯಕ್ಕೂ ಮತ್ತು ಪಣಿಯನ್ ಸಮುದಾಯಕ್ಕೂ ಹೆಮ್ಮೆಯ ಸಂಗತಿ ಎಂದರು.
ಘಟಿಕೋತ್ಸವ ಮುನ್ನ ದಿನ ಜ. ೦೯ರಂದು ಮಂಟಪ ಸಭಾಂಗಣದಲ್ಲಿ ಪ್ರಸಾರಂಗದಿಂದ ಪ್ರಕಟಣೆಗೊಂಡ ೫೧ ಪುಸ್ತಕಗಳನ್ನು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಬಿಡುಗಡೆಗೊಳಿಸಲಿದ್ದಾರೆ ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರೋ. ಲಕ್ಷಣ ತೆಲಗಾವಿ ಮಾತನಾಡಲಿದ್ದಾರೆ. ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಡಾ.ವಿಜಯ್ ಪೂಣಚ್ಛ ತಂಬಂಡ, ಉಪಕುಲಸಚಿವ ಡಾ.ಎ.ವೆಂಕಟೇಶ, ಅಧ್ಯಯನಾಂಗದ ನಿರ್ದೇಶಕ ಡಾ.ಮಹದೇವಯ್ಯ, ವಿವಿಧ ನಿಕಾಯಗಳ ಡೀನರಾದ ಡಾ.ಎಫ್.ಟಿ.ಹಳ್ಳಿಕೇರಿ, ಡಾ.ಚಲುವರಾಜು, ಡಾ.ಶಿವಾನಂದ ಎಸ್.ವಿರಕ್ತಮಠ, ಡಾ.ಶೈಲಲಜ ಇಂ.ಹಿರೇಮಠ, ಪ್ರಾಧ್ಯಾಪಕರಾದ ಡಾ.ಅಶೋಕ ಕುಮಾರ ರಂಜೇರೆ, ಡಾ.ವಿರೂಪಾಕ್ಷಿ ಪೂಜಾರಹಳ್ಳಿ, ತಾಂತ್ರಿಕ ವಿಭಾಗದ ಇಇ ಜೆ.ಎಸ್.ನಂಜಯ್ಯನವರ್, ಮಾಧ್ಯಮ ಸಂಚಾಲಕಿ ಡಾ.ಡಿ.ಮೀನಾಕ್ಷಿ ಸೇರಿದಂತೆ ಹಣಕಾಸು ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.
More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ