December 5, 2024

Hampi times

Kannada News Portal from Vijayanagara

ವಿಜಯನಗರ ಜಿಲ್ಲೆಯಾದ್ಯಂತ 18 ಪಿಯು ಪರೀಕ್ಷಾ ಕೇಂದ್ರ, ಮೊಬೈಲ್‌ ನಿಷೇಧ : ಡಿಸಿ ದಿವಾಕರ

 

https://youtu.be/NHc6OMSu0K4?si=SI_K4goOPEgwo6h2

ಮಾ.1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ:
ಪರೀಕ್ಷಾ ಕೇಂದ್ರದ ಸುತ್ತಲು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆದೇಶ
ಹಂಪಿ ಟೈಮ್ಸ್ ಹೊಸಪೇಟೆ 
ವಿಜಯನಗರ ಜಿಲ್ಲೆಯಾದ್ಯಂತ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಮಾ.1 ರಿಂದ ಮಾ.22 ರವರೆಗೆ ನಡೆಯುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.‌
ಪರೀಕ್ಷೆಗಳು ಸುಗಮವಾಗಿ ನಡೆಸುವ ಹಿತದೃಷ್ಠಿಯಿಂದ ಹಾಗೂ ಪ್ರತಿ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬರುವ ಹಿನ್ನೆಲೆಯಲ್ಲಿ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸುವುದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲು ಜೆರಾಕ್ಸ್ ಮತ್ತು ಕಂಪ್ಯೂಟರ್ ಸೈಬರ್ ಅಂಗಡಿಗಳನ್ನು ಮುಚ್ಚುವುದು ಸೂಕ್ತವೆಂದು ಮನಗಂಡು ಸಿ.ಆರ್.ಪಿ.ಸಿ ಕಾಯ್ದೆ 1973 ರ ಕಲಂ 144 ರನ್ವಯ ಪ್ರದತ್ತವಾದ ಅಧಿಕಾರದ ಮೇರೆಗೆ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.
ಈ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ಮಾತ್ರ ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅನುಮತಿಸಿದ್ದು, ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ ವಿದ್ಯಾರ್ಥಿಗಳು ಮೊಬೈಲ್ ತರುವುದು ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಈ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ. ಈ ಆದೇಶವು ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ-1 ನ್ನು ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪೊಲೀಸ್ ಇಲಾಖೆಗೆ ಸೂಚನೆ: ಮಾರ್ಚ್-2024ನೇ ಸಾಲಿನಲ್ಲಿ ಮಾ 01 ರಿಂದ ಮಾ22ರವರೆಗೆ ನಡೆಯುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ-1ರಲ್ಲಿ ಅವ್ಯವಹಾರಗಳನ್ನು ತಡೆಗಟ್ಟಲು ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ಧಾರೆ. ಜಿಲ್ಲೆಯಲ್ಲಿರುವ ಒಟ್ಟು 18 ಪರೀಕ್ಷಾ ಕೇಂದ್ರಗಳಿಗೆ, ಅವಶ್ಯಕತೆಗೆ ಅನುಗುಣವಾಗಿ ಪೊಲೀಸ್ ಬಂದೋಬಸ್ತ್ನ್ನು ಒದಗಿಸಬೇಕು. ಜಿಲ್ಲೆಯಲ್ಲಿ ಪರೀಕ್ಷಾ ಗೌಪ್ಯ ವಸ್ತುಗಳ ಠೇವಣೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯವಸ್ತುಗಳ ವಿತರಣೆಯನ್ನು ಸುವ್ಯವಸ್ಥಿತವಾಗಿ ಕರ್ನಾಟಕ ಸೆಕ್ಯೂರ್ ಎಕ್ಷಾಮಿನೇಷನ್ ಸಿಸ್ಟಮ್‌ನ್ನು ಅಳವಡಿಸಿ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಗೌಪ್ಯವಸ್ತುಗಳನ್ನು ಠೇವಣಿಸಲಾದ ಜಿಲ್ಲಾ ಖಜಾನೆ, ಹೊಸಪೇಟೆಯಲ್ಲಿ ಪೂರ್ಣಾವಧಿಯ 24/7 ಸಶಸ್ತç ಪೊಲೀಸ್ ಪಹರೆಯನ್ನು ಒದಗಿಸಬೇಕು. ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳ ವಿರುದ್ಧ ಅಗತ್ಯವಾದ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪ್ರಶ್ನೆ ಪತ್ರಿಕೆ ವಿತರಕರ ತಂಡಗಳು, ಹೊಸಪೇಟೆ ಖಜಾನೆಯಿಂದ ಹೊರಡಲಿರುವ ಮಾರ್ಗಾಧಿಕಾರಿಗಳ ತಂಡಕ್ಕೆ ಮತ್ತು ಖಜಾನೆಯಿಂದ ಹೊರಡಲಿರುವ ಮಾರ್ಗಕ್ಕೆ ಬೆಂಗಾವಲಿಗೆ ಸಶಸ್ತç ಪೊಲೀಸ್ ಸಿಬ್ಬಂದಿ ನೇಮಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

 

 

ಜಾಹೀರಾತು
error: Content is protected !!