https://youtu.be/NHc6OMSu0K4?si=SI_K4goOPEgwo6h2
ಮಾರ್ಚ-1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭ
ಹಂಪಿ ಟೈಮ್ಸ್ ಹೊಸಪೇಟೆ:
ವಿಜಯನಗರ ಜಿಲ್ಲೆಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 18 ಕೇಂದ್ರಗಳಲ್ಲಿ ಆರಂಭವಾಗಲಿವೆ ಎಂದು ವಿಜಯನಗರ ಜಿಲ್ಲಾ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ನೋಡಲ್ ಅಧಿಕಾರಿ ನಾಗರಾಜ್ ಹವಾಲ್ದಾರ್ ತಿಳಿಸಿದ್ದಾರೆ.
ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಅಂದಾಜು 16 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದು ಸುಗಮವಾಗಿ ಪರೀಕ್ಷೆ ನಡೆಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಿಂದ ನೂರು ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದ್ದು ಈ ವ್ಯಾಪ್ತಿಯಲ್ಲಿ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಜೆರಾಕ್ಸ ಅಂಗಡಿಗಳು ಹಾಗೂ ಮುದ್ರಣ ಯಂತ್ರಗಳ ಅಂಗಡಿಗಳನ್ನು ತೆರೆಯುವಂತಿಲ್ಲ.
ವಿದ್ಯಾರ್ಥಿಗಳ ಸುರಕ್ಷತೆಗಾಗಿ ಪೋಲೀಸ್ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಪರೀಕ್ಷಾ ಕೇಂದ್ರಗಳಲ್ಲಿ ಉಪಸ್ಥಿತರಿರುತ್ತಾರೆ. ಕಟ್ಟುನಿಟ್ಟಾಗಿ ಪರೀಕ್ಷೆಗಳನ್ನು ನಡೆಸಲು ಬೇರೆ ಜಿಲ್ಲೆಗಳಿಂದ ವಿಶೇಷ ಜಾಗೃತ ದಳದ ಸಿಬ್ಬಂದಿಯನ್ನು ನೇಮಿಸಲಾಗಿದೆ ಹಾಗೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಜೊತೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ವೀಕ್ಷಕರಾಗಿ ಮಾನ್ಯ.ಜಿಲ್ಲಾಧಿಕಾರಿಗಳು ನೇಮಿಸಿದ್ದು ಅವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆಗಳ ಸುಗಮ ನಿರ್ವಹಣೆಯ ಕುರಿತು ವರದಿ ನೀಡಲಿದ್ದಾರೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಿ ಯಶಸ್ಸು ಗಳಿಸಿ ಜಿಲ್ಲೆಯ ಫಲಿತಾಂಶವನ್ನು ಉತ್ತಮಗೊಳಿಸುವ ಆಶಯವನ್ನು ನಾಗರಾಜ್ ಹವಾಲ್ದಾರ್ ವ್ಯಕ್ತಪಡಿಸಿದ್ದಾರೆ.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ