https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಕೊಪ್ಪಳ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಧ್ವನಿ ಶಿಕ್ಷಣ ಮತ್ತು ಗ್ರಾಮೀಣ ಕ್ಷೇಮಾಭಿವೃದ್ಧಿ ಸಂಸ್ಥೆ ಕೊಪ್ಪಳ ಇವರ ಸಹಭಾಗಿತ್ವದಲ್ಲಿ ಕೊಪ್ಪಳ ನಗರದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆಯುತ್ತಿರುವ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ-2005 ಹಾಗೂ ನಿಯಮಗಳು 2006 ಅನುಷ್ಠಾನ ಕುರಿತು ಸಂರಕ್ಷಣಾಧಿಕಾರಿಗಳು ಮತ್ತು ಇತರೆ ಭಾಗಿದಾರರುಗಳಿಗೆ ಓರಿಯೆಂಟೆಷನ ತರಬೇತಿ ಹಮ್ಮಿಕೊಳ್ಳಲಾಗಿತ್ತು.
ಗೌರವಾನ್ವಿತ ಕೊಪ್ಪಳ ತ್ವರಿತಗತಿ ಫೋಕ್ಸೊ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ, ಮಹಿಳೆಯರು ಸಮಾಜದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ. ಕೌಟುಂಬಿಕ ದೌರ್ಜನ್ಯ, ಹಿಂಸೆ ಅನುಭವಿಸುವ ಮಹಿಳೆಯರು ಹಿಂಜರಿಯದೆ ನ್ಯಾಯ ಕೇಳಬಹುದು ಮಹಿಳೆ ಈ ಸಮಾಜದ ಬೆಳಕು. ಲಿಂಗ ತಾರತಮ್ಯ ಬೇಡ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ತಿಪ್ಪಣ್ಣ ಸಿರಸಗಿ ಮಾತನಾಡಿ, ಮಹಿಳೆಯರ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ನಮ್ಮ ಇಲಾಖೆಯ ಸಹಕಾರ ಸದಾ ಇರುತ್ತದೆ ಎಂದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯ ಬಗ್ಗೆ ವಕೀಲರಾದ ಹನಮಂತರಾವ್, ಲಿಂಗ ತಾರತಮ್ಯದ ಬಗ್ಗೆ ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆಯ ರಾಘವೇಂದ್ರ ಭಟ್ ಹಾಗೂ ಕಾಯ್ದೆ ಅನುಷ್ಠಾನದಲ್ಲಿ ಇಲಾಖೆಯ ಸಮನ್ವವದ ಬಗ್ಗೆ ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆಯ ಹರೀಶ ಜೋಗಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ, ಡಿ.ಹೆಚ್.ಓ ಡಾ.ಲಿಂಗರಾಜು, ಕೊಪ್ಪಳ ತಹಶೀಲ್ದಾರರಾದ ವಿಠಲ್ ಚೌಗಲ್, ತಾ.ಪಂ ಇಓ ದುಂಡಪ್ಪ ತುರಾದಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಯಶ್ರೀ ಆರ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧ ಇಲಾಖೆಯ ಗಂಗಪ್ಪ, ಮಹಿಳಾ ಧ್ವನಿ ಶಿಕ್ಷಣ ಮತ್ತು ಗ್ರಾಮೀಣ ಕ್ಷೇಮಾಭಿವೃದ್ಧಿ ಸಂಸ್ಥೆಯ ಪ್ರಿಯದರ್ಶಿನಿ ಮುಂಡರಗಿಮಠ ಹಾಗೂ ಇಲಾಖೆಯ ಅಧಿಕಾರಿಗಳು ಮತ್ತಿರರು ಉಪಸ್ಥಿತಿ ಇದ್ದರು.
More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ