December 14, 2024

Hampi times

Kannada News Portal from Vijayanagara

ಕಂದಾಯ ಪರಿವೀಕ್ಷಕ ಬಿ.ಮುರಳಿಕೃಷ್ಣ ಅಮಾನತ್ತು : ಡಿಸಿ ಆದೇಶ

 

https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹೊಸಪೇಟೆ:
ಕೂಡ್ಲಿಗಿ ತಾಲೂಕು ಹೊಸಹಳ್ಳಿ ಹೋಬಳಿ ಕಂದಾಯ ಪರಿವೀಕ್ಷಕ ಬಿ.ಮುರುಳಿಕೃಷ್ಣ ಇವರು ಮೇಲಾಧಿಕಾರಿಗಳ ಅನುಮತಿ ಪಡೆಯದೇ ಪದೇ ಪದೇ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಿ ಮತ್ತು ಸರ್ಕಾರಿ ಕೆಲಸವನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯತನ ಹಾಗೂ ಬೇಜವಾಬ್ಧಾರಿತನ ತೋರಿರುವುದರಿಂದ ಕರ್ನಾಟಕ ನಾಗರಿಕ ಸೇವಾ ನಿಯಮದಡಿ ಸೇವೆಯಿಂದ ಅವರನ್ನು ಅಮಾನತ್ತುಗೊಳಿಸಲಾಗಿದೆ ಎಂದು ಶಿಸ್ತುಪ್ರಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಆದೇಶಿಸಿದ್ದಾರೆ.
ಮೇಲಾಧಿಕಾರಿಗಳ ನೋಟೀಸಿಗೆ ಸಮರ್ಪಕವಾಗಿ ಸ್ಪಂದಿಸದೇ, ಸರ್ಕಾರಿ ಕೆಲಸಕ್ಕೆ 62 ದಿನ ಕರ್ತವ್ಯಕ್ಕೆ ಗೈರು, ತಾವು ನಿರ್ವಹಿಸುತ್ತಿದ್ದ ಅಭಿಲೇಖಾಲಯದ ಕೊಠಡಿಯ ಬೀಗದ ಕೈಯನ್ನು ಯಾರಿಗೂ ನೀಡದೇ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಕೆಲಸಕ್ಕೆ ತೊಂದರೆಯುಂಟು ಮಾಡಿದ್ದಾರೆ ಎಂಬ ವರದಿಯಾಧರಿಸಿ ಅಮಾನತ್ತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

 

 

ಜಾಹೀರಾತು
error: Content is protected !!