https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಬಳ್ಳಾರಿ
ಮತದಾನ ಆದ್ಯ ನಾಗರಿಕರ ಕರ್ತವ್ಯವಾಗಿದ್ದು, ಅರ್ಹ ಮತದಾರರು ತಪ್ಪದೇ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಇವರ ಆಶ್ರಯದಲ್ಲಿ ನಗರದ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು.
ಮೇ 07 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬ ನಾಗರಿಕರು ಮತ ಚಲಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಬಳ್ಳಾರಿ ತಾಲ್ಲೂಕು ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಚನ್ನಬಸಪ್ಪ ಮಾತನಾಡಿ, ಯಾವುದೇ ಆಸೆ-ಅಮೀಷಗಳಿಗೆ ಒಳಗಾಗದೇ ಮೇ 07 ರಂದು ಪ್ರತಿಯೊಬ್ಬರು ಮತ ಚಲಾಯಿಸಬೇಕು. ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಎಂಪಿಎಂಸಿ ಮಾರುಕಟ್ಟೆಯ ಅಧಿಕಾರಿ, ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
More Stories
ಕಳಚಿ ಬಿತ್ತು ರಾಷ್ಟ್ರಧ್ವಜ, ಈಬಾರಿ ಬಜೆಟ್ನಲ್ಲಿ ವಿಜಯನಗರ ಜಿಲ್ಲೆಗೆ ಮೆಡಿಕಲ್ ಕಾಲೇಜ್ : ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಭರವಸೆ
ತ್ರಿವಿಧ ದಾಸೋಹದ ದಕ್ಷಿಣ ಭಾರತದ ಕುಂಭಮೇಳ… ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ರಥೋತ್ಸವ