https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಬಳ್ಳಾರಿ
ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮೇ. 07 ರಂದು ಜರುಗುವ ಮತದಾನದಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸಿ ಹಾಗೂ ನಿಮ್ಮ ಕುಟುಂಬದ ಎಲ್ಲಾ ಅರ್ಹ ಮತದಾರರು ಸಹ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಕಳೆದ ಚುನಾವಣೆಗಳಲ್ಲಿ ಬಳ್ಳಾರಿ ನಗರದಲ್ಲಿ ಕಡಿಮೆ ಮತದಾನವಾದ ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯನ್ನು ಗುರಿಯಾಗಿಸಿ, ಮತದಾರರಲ್ಲಿ ಜಾಗೃತಿ ಮೂಡಿಸಲು ಸೋಮವಾರದಂದು ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಡಳಿತ ಭವನದ ಆವರಣದಿಂದ ಏರ್ಪಡಿಸಿದ್ದ “ಬೈಕ್ ಜಾಥಾ” ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಚುನಾವಣೆಯು ಹಬ್ಬವಿದ್ದಂತೆ, ಪ್ರತಿಯೊಬ್ಬ ನಾಗರಿಕರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡು ಹೆಮ್ಮೆಯಿಂದ ಮತ ಚಲಾಯಿಸುವ ಮೂಲಕ ಸಂಭ್ರಮದಿಂದ ಆಚರಿಸಬೇಕು ಎಂದರು.
ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದು, ಈ ಬಾರಿ ಜಿಲ್ಲೆಯಲ್ಲಿ ಶೇ.100 ರಷ್ಟು ಮತದಾನ ಪ್ರಮಾಣ ಹೆಚ್ಚಲು ಶ್ರಮ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಭವ್ಯ ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಮತ್ತು ಮುಂದುವರಿಸಲು ಚುನಾವಣೆಯಲ್ಲಿ ಮತದಾನ ಮಾಡುವ ಪ್ರಕ್ರಿಯೆ ಬಹುಮುಖ್ಯವಾಗಿದೆ. ಹಾಗಾಗಿ ಎಲ್ಲರೂ ಮತದಾನ ಮಾಡಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಈ ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಶೇಕಡವಾರು ಮತದಾನ ಪ್ರಮಾಣ ಹೆಚ್ಚಳವಾಗಲು ಎಲ್ಲಾ ಅಧಿಕಾರಿಗಳು ಸಹಕರಿಸಬೇಕು ಎಂದರು.
ಸಹಾಯಕ ಆಯುಕ್ತ ಹೇಮಂತ್ ಅವರು ಮಾತನಾಡಿ, ಮೇ 07 ರಂದು ತಪ್ಪದೇ ಮೊದಲು ಮತದಾನ ಮಾಡಿ, ನಂತರ ತಮ್ಮ ದಿನಚಟುವಟಿಕೆ ಕೆಲಸ ಕಾರ್ಯಗಳನ್ನು ಮುಂದುವರಿಸಿ ಎಂದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಅವರು ಹೆಲ್ಮೆಟ್ ಧರಿಸಿ, ಮತದಾನ ಜಾಗೃತಿಯ ಪ್ರದರ್ಶನ ಫಲಕದೊಂದಿಗೆ ಸ್ಕೂಟರ್ ಏರಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಬೈಕ್ ಜಾಥಾದಲ್ಲಿ ಪಾಲ್ಗೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಸ್ಕೂಟರ್ ಚಲಾಯಿಸಿ ಎಲ್ಲರ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ‘ನಾನು ಹೆಮ್ಮೆಯ ಮತದಾರ ಕಡ್ಡಾಯವಾಗಿ ಮತ ಚಲಾಯಿಸುವೆ’ ಎನ್ನುವ ಸೆಲ್ಪಿ ಬೂತ್ ತೆರೆಯಲಾಗಿತ್ತು.
ಬೈಕ್ ಜಾಥಾವು ನಗರದ ಹೊಸ ಜಿಲ್ಲಾಧಿಕಾರಿಗಳ ಕಚೇರಿಯಿಂದ ಆರಂಭಗೊಂಡು ತೇರುಬೀದಿ, ಹೆಚ್.ಆರ್.ಗವಿಯಪ್ಪ ವೃತ್ತ (ಮೋತಿ ಸರ್ಕಲ್), ಕೌಲ್ ಬಜಾರ್, ಸುಧಾಕ್ರಾಸ್, ದುರುಗಮ್ಮ ದೇವಸ್ಥಾನ, ಮೋಕಾ ರಸ್ತೆ, ಎಸ್.ಎನ್.ಪೇಟೆ, ಸಂಗಂ ವೃತ್ತದಿಂದ ಮರಳಿ ಹೊಸ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಅಂತಿಮಗೊಂಡಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕಿ ಸಕೀನಾ, ತಹಶೀಲ್ದಾರ ಗುರುರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಭಾಗವಹಿಸಿದ್ದರು.

More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ