December 8, 2024

Hampi times

Kannada News Portal from Vijayanagara

ಹೊಸಪೇಟೆಯಲ್ಲಿ ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ

 

https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್‌ ಹೊಸಪೇಟೆ 
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ಚೀಪ್ ಸಮಿತಿಯಿಂದ ಹೊಸಪೇಟೆ ನಗರದಲ್ಲಿ ಏಪ್ರೀಲ್ 30ರಂದು ಬೈಕ್ ರಾಲಿ ನಡೆಯಿತು.
ಬೈಕ್ ರ‍್ಯಾಲಿ ಹಿನ್ನೆಲೆಯಲ್ಲಿ ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯು ತಮ್ಮ ತಮ್ಮ ಬೈಕ್‌ಗಳು ಮತ್ತು ಸ್ಕೂಟಿಗಳೊಂದಿಗೆ ಸಂಜೆ ವೇಳೆಗೆ ಜಿಲ್ಲಾಡಳಿತ ಭವನದ ಆವರಣಕ್ಕೆ ಆಗಮಿಸಿದ್ದರು. ಮಹಿಳಾ ನೌಕರರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು ವಿಶೇಷವಾಗಿತ್ತು.
ಹೊಸಪೇಟೆಯ ಡ್ಯಾಮ್ ರಸ್ತೆಯಲ್ಲಿರುವ ಜಿಲ್ಲಾಡಳಿತ ಭವನದ ಆವರಣದಲ್ಲಿ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಮತದಾನ ಜಾಗೃತಿಯ ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಮತದಾನವು ಪ್ರತಿಯೊಬ್ಬರಿಗೂ ಸಂವಿಧಾನಬದ್ಧವಾಗಿ ಬಂದಿರುವ ಹಕ್ಕಾಗಿದೆ. ಹೀಗಾಗಿ ಪ್ರತಿಯೊಬ್ಬರು ಮತದಾನದಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಸದಾಶಿವ ಪ್ರಭು ಬಿ ಅವರು ಮಾತನಾಡಿ, ಜಿಲ್ಲಾಡಳಿತದ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲಾದ್ಯಂತ ಸಾಕಷ್ಟು ಸ್ವೀಪ್ ಕಾರ್ಯಕ್ರಮಗಳನ್ನು ರೂಪಿಸಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತದಾನದ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.
ವಿವಿಧೆಡೆ ಸಂಚಾರ: ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ವತಃ ತಾವೆ ಬೈಕ್ ಚಲಾಯಿಸಿ ಇತರರಿಗೆ ಸ್ಪೂರ್ತಿ ತುಂಬಿದರು. ಬೈಕ್ ರಾಲಿಯು ಜಿಲ್ಲಾಡಳಿತ ಭವನದಿಂದ ಆರಂಭಗೊAಡು ಸಾಯಿಬಾಬಾ ಸರ್ಕಲ್, ಬಲ್ಡೋಟಾ ಕಾಲೊನಿ, ನೆಹರೂ ಕಾಲೊನಿ, ವಾಲ್ಮೀಕಿ ಸರ್ಕಲ್, ಮಿಲನ್ ಪೆಟ್ರೋಲ್ ಬಂಕ್, ಚಪ್ಪರದಹಳ್ಳಿ, ಹಿರೋಹೊಂಡಾ ಶೋರೂಮ್, ಬಸವೇಶ್ವರ ಬಡಾವಣೆ, ಸ್ವಾಗಿ ಮಾರ್ಕೇಟ್ ಮೂಲಕ ಸಂಚರಿಸಿ ಸಿಟಿ ಮುನ್ಸಿಪಲ್ ಆಫೀಸ್ ಆವರಣಕ್ಕೆ ಬಂದು ಮುಕ್ತಾಯವಾಯಿತು.
ಬೈಕ್ ರ‍್ಯಾಲಿ ವೇಳೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಹೆಚ್.ಎಸ್., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶರಾದ ರಾಮಚಂದ್ರಪ್ಪ, ರೇಷ್ಮೆ ಇಲಾಖೆಯ ಉಪ ನಿರ್ದೇಶಕರಾದ ಸುಧೀರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಯುವರಾಜ ನಾಯಕ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ, ಹೊಸಪೇಟೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹರೀಶ್, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ, ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕರಾದ ರವಿಕುಮಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂದು ಯಲಿಗಾರ ಸೇರಿದಂತೆ ಇತರರು ಇದ್ದರು.
ಪ್ರತಿಜ್ಞಾವಿಧಿ ಬೋಧನೆ: ಬೈಕ್ ರ‍್ಯಾಲಿಯ ಆರಂಭಕ್ಕು ಮೊದಲು ಮತದಾನ ಜಾಗೃತಿಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಅನ್ನದಾನೇಶ್ವರ ಸ್ವಾಮಿ ಜೆ.ಎಂ.ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಗಮನ ಸೆಳೆದ ಫಲಕಗಳು: ‘ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುವೆ.’, ‘ನಿಮ್ಮ ಮತ ನಿಮ್ಮ ಹಕ್ಕು’., ‘ಕಡ್ಡಾಯವಾಗಿ ಮಾತದಾನ ಮಾಡಿ’ ಎನ್ನುವ ನಾನಾ ಘೋಷಣೆಗಳು ಇರುವ ಫಲಕಗಳನ್ನು ಬೈಕ್‌ಗೆ ಕಟ್ಟಿ ಸಾಲಾಗಿ ಸಾಗಿದ್ದು ವಿಶೇಷವಾಗಿತ್ತು.

 

 

ಜಾಹೀರಾತು
error: Content is protected !!