ಕರ್ನಾಟಕ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮತದಾನವು ಮೇ 7ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೇ 5ರ ಸಂಜೆ 06 ಗಂಟೆಯಿAದ ಮೇ 08ರ ಸಂಜೆ 06 ಗಂಟೆಯವರೆಗೆ ವಿಜಯನಗರ ಜಿಲ್ಲಾದ್ಯಂತ ಸಿಆರ್‌ಪಿಸಿ 1973ರ ಕಲಂ 144ರಡಿ ಹಾಗೂ ಇತರೆ ಜಾರಿಯಲ್ಲಿರುವ ಕಾನೂನು ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಕೆಲವು ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.
ಭಾರತ ಚುನಾವಣಾ ಆಯೋಗವು ಕರ್ನಾಟಕ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನಲೆಯಲ್ಲಿ ಚುನಾವಣೆಯನ್ನು ಘೋಷಿಸಿದ್ದು, ಅದರಂತೆ ಮೇ 7ರಂದು ಮತದಾನ ನಡೆಯಲಿದೆ. ವಿಜಯನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಮತದಾನ ದಿನದಂದು ಮತದಾನ ಕೊನೆಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಮಾದರಿ ನೀತಿ ಸಂಹಿತೆ ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಕಲಂ 126 ರನ್ವಯ ಇರುವ ಷರತ್ತುಗಳು ಹಾಗೂ ನಿಂಬAಧನೆಗಳನ್ನು ತಪ್ಪದೇ ಪಾಲಿಸಬೇಕಾಗುತ್ತದೆ.
ಮತದಾರರಿಗೆ ವಿವಿಧ ಆಸೆಗಳಿಗೆ ಒಳಪಡಿಸುವುದು, ಬೆದರಿಸಲು ಯತ್ನಿಸುವುದು, ತಮ್ಮ ಪರವಾಗಿ ವರ್ತಿಸಲು ಪ್ರೇರೇಪಿಸುವುದು, ಮತಗಟ್ಟೆ ಕೇಂದ್ರಗಳ ಹತ್ತಿರದಲ್ಲಿ ಪ್ರಚಾರ ಮಾಡುವುದು, ಸಾರ್ವಜನಿಕ ಸಭೆ ನಡೆಸುವುದು, ಮತದಾರರನ್ನು ವಿವಿಧ ಸಾರಿಗೆ ವ್ಯವಸ್ಥೆಗಳ ಮೂಲಕ ಮತಗಟ್ಟೆಗಳಿಗೆ ಕರೆ ತರುವುದು, ಶಾಂತತೆಗೆ ಭಂಗ ಉಂಟು ಮಾಡುವುದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವುದು ಹಾಗೂ ಇತರೆ ಅಹಿತಕರ ಘಟನೆಗಳು ನಡೆಯುವಂತೆ ಮಾಡುವ ಸಂಭವನೀಯತೆಗಳಿದ್ದು ಇದನ್ನು ತಡೆಗಟ್ಟುವುದು ಹಾಗೂ ಮತದಾನ ಪಾವಿತ್ರ‍್ಯತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ, 1973ರ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ವಿಧಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಅವಶ್ಯಕವೆಂದು ಕಂಡು ಬಂದಿರುವುದರಿAದ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಲಾಗಿದೆ.
ವಿಜಯನಗರ ಜಿಲ್ಲೆಯ ವ್ಯಾಪ್ತಿಯಲ್ಲಿ 05ಕ್ಕಿಂತ ಹೆಚ್ಚು ಜನ ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ., ಚುನಾವಣಾ ಅಭ್ಯರ್ಥಿ ಬೆಂಬಲಿಗರು ಸೇರಿ 05 ಜನರಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದ್ದಲ್ಲ., ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ., ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ., ಕಲ್ಲುಗಳನ್ನು, ಕಾರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಹಾಗೂ ಯಾವುದೇ ದಾಹಕ ವಸ್ತುಗಳನ್ನು ಹಾಗೂ ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ., ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು, ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ., ಮನುಷ್ಯ ರೂಪದ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ದÀಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ., ಎಲ್ಲಾ ಮತಗಟ್ಟೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ,
ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ ಹಾಗೂ ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದ ಓಲೈಕೆ ಮುಂತಾದವುಗಳನ್ನು ಮಾಡುವಂತಿಲ್ಲ ಮತ್ತು ಈ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗತರುವAತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬAದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬAಧಿಸಿದ ವ್ಯಕ್ತಿಗಳ ಮೇಲೆ ಕಾನೂನುರೀತ್ಯ ಕ್ರಮ ಜರುಗಿಸಲಾಗುವುದು. ಶವಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದAತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ನಿಯಮಗಳನ್ನುಪಾಲಿಸುವುದು.
ಮತಗಟ್ಟೆ ಕೇಂದ್ರಗಳ ಸುತ್ತಲೂ 100 ಮೀಟರ್ ಅಂತರದಲ್ಲಿ ಮೊಬೈಲ್ ಪೋನ್, ಕಾರ್ಡಲೆಸ್ ಪೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. (ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೊರತುಪಡಿಸಿ)., ಈ ಅವಧಿಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126ರ ಷರತ್ತುಗಳನ್ನು ಪಾಲಿಸತಕ್ಕದ್ದು., ಮತಗಟ್ಟೆಗಳ ಸುತ್ತಲೂ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬAಧಿಸಿದ ಪೋಸ್ಟರ್ ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ., ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ., ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು, ಈ ಅವಧಿಯಲ್ಲಿ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು., ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲ್‌ಗಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಹೂಡಿದವರ ಪಟ್ಟಿಗಳ ಪರಿಶೀಲನೆ ಮಾಡಿ ಮತದಾರರಲ್ಲದವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮವಹಿಸುವುದು., ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕ್ರಮ ಜರುಗಿಸಲಾಗುವುದು. ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರತಿಬಂಧಕಾಜ್ಞೆಯಲ್ಲಿ ತಿಳಿಸಿದ್ದಾರೆ.
More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ