https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಹೊಸಪೇಟೆ
ಲೋಕಸಭಾ ಚುನಾವಣಾ ಕಾರ್ಯಕ್ಕೆ ನಿರಾಕರಣೆ ಮತ್ತು ಬೇಜವಾಬ್ಧಾರಿ ತೋರಿದ ಮೇರೆಗೆ ಇಬ್ಬರು ಶಿಕ್ಷಕಿಯರನ್ನು ತಕ್ಷಣದಿಂದಲೇ ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಎಂ.ಎಸ್. ದಿವಾಕರ ಆದೇಶ ಹೊರಡಿಸಿದ್ದಾರೆ.
ಕೂಡ್ಲಿಗಿ ಕ್ಷೇತ್ರದ ಗುಡೆಕೋಟೆ ಹೋಬಳಿಯ ಮತಗಟ್ಟೆ ಸಂಖ್ಯೆ 119 ಕ್ಕೆ ಬಿಎಲ್‌ಒ ಆಗಿ ನಿಯೋಜನೆಗೊಂಡಿದ್ದ ವಡ್ಡರಹಟ್ಟಿ ಸಿದ್ದಾಪುರ ಸ.ಹಿ.ಪ್ರಾ.ಶಾಲೆ ಶಿಕ್ಷಕಿ ಸುನಂದ ನ್ಯಾಮತಿ ಮತ್ತು ಮತಗಟ್ಟೆ ಸಂಖ್ಯೆ 120ಕ್ಕೆ ಬಿಎಲ್ ಒ ಆಗಿ ನಿಯೋಜನೆಗೊಂಡಿದ್ದ ಕೂಡ್ಲಿಗಿ ತಾಲೂಕಿನ ಗುಂಡಮುಣಗು ಸ.ಮಾ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕಿ ಮಮತಾ ಇವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿದ್ದಾರೆ. ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಲಾಗಿದ್ದು, ಅನುಮತಿ ಪಡೆಯದೇ ಕೇಂದ್ರ ಸ್ಥಾನ ತೊರೆಯುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
More Stories
ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ
ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಗುಡೇಕೋಟೆ ನಾಗರಾಜ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ