November 11, 2024

Hampi times

Kannada News Portal from Vijayanagara

ಜಿಲ್ಲೆಯಾದ್ಯಂತ ವಿವಿಧ ಮತಗಟ್ಟೆಗಳಿಗೆ ಜಿಪಂ ಸಿಇಓ ಸದಾಶಿವ ಪ್ರಭು ಬಿ ಭೇಟಿ: ಪರಿಶೀಲನೆ

 

https://youtu.be/NHc6OMSu0K4?si=SI_K4goOPEgwo6h2

 

ಹಂಪಿ ಟೈಮ್ಸ್ ಹೊಸಪೇಟೆ 
ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸದಾಶಿವ ಪ್ರಭು ಬಿ ಅವರು ಮೇ 6ರಂದು ವಿಜಯನಗರ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತಗಟ್ಟೆಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.
ಹಡಗಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹಾಜನದಹಳ್ಳಿ ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾಜನದಳ್ಳಿ ಗ್ರಾಮಕ್ಕೆ ಸಿಇಓ ಅವರು ಭೇಟಿ ನೀಡಿದರು. ಅಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆ ಕೇಂದ್ರಗಳಲ್ಲಿ ಮತದಾರರಿಗೆ ಹಾಗೂ ವಿಶೇಷಚೇತನರಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ವೀಲ್‌ಚೇರ್ ಸೌಕರ್ಯಗಳ ಕುರಿತು ಸಿಇಓ ಅವರು ಪರಿಶೀಲಿಸಿದರು. ಇಟಗಿ ಗ್ರಾಮ ಪಂಚಾಯಿತಿಯಲ್ಲಿ ಇಟ್ಟಿಗೆ ಗ್ರಾಮದಲ್ಲಿನ 07 ಮತಗಟ್ಟೆಯ ಸಿಬ್ಬಂದಿ ಆಹಾರ ತಯಾರಿಕೆಯ ಬಗ್ಗೆ ಸಿಇಓ ಅವರು ಮಾಹಿತಿ ಪಡೆದರು.
ಹಗರಿಬೊಮ್ಮನಹಳ್ಳಿಗೆ ಭೇಟಿ: ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕೊಟ್ಟೂರು ತಾಲೂಕಿನ ಕೆ ಅಯ್ಯನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಹಾಗೂ ಕೊಟ್ಟೂರು ತಾಲೂಕಿನ ಕಂದಗಲ್ಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗಳಿಗೆ ಸಹ ಸಿಇಓ ಅವರು ಭೇಟಿ ನೀಡಿ ಮತಗಟ್ಟೆಗಳಲ್ಲಿನ ಮೂಲಭೂತ ಸೌಕರ್ಯಗಳ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದರು.
ಕೂಡ್ಲಿಗಿ ತಾಲೂಕಿಗೆ ಭೇಟಿ: ಸಿಇಓ ಅವರು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಬಡೇಲಡಕು ಗ್ರಾಮ ಪಂಚಾಯಿತಿಯ ಈಚಲಬೊಮ್ಮನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ, ಶಿವಪುರ ಗ್ರಾಮ ಪಂಚಾಯಿತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 02 ಮತಗಟ್ಟೆಗಳು ಮತ್ತು ಕೈವಲ್ಯಪುರದಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 01 ಮತಗಟ್ಟೆಗೆ ಭೇಟಿ ನೀಡಿ ಅಲ್ಲಿನ ಮತಗಟ್ಟೆಗಳಲ್ಲಿನ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮತ್ತು ಶೌಚಾಲಯಕ್ಕೆ ನೀರಿನ ಸಂಪರ್ಕದ ಬಗ್ಗೆ ಮಾಹಿತಿ ಪಡೆದರು.
ಹರಪನಹಳ್ಳಿಗೂ ಭೇಟಿ: ಹರಪನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂದಿಬೇವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಬೇವೂರು ಮತ್ತು ಕಣಿವೆಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆ ಕೇಂದ್ರಗಳಿಗೆ ಸಿಇಓ ಅವರು ಮೇ 6ರಂದು ಭೇಟಿ ನೀಡಿದರು. ಅಲ್ಲಿನ ಮತದಾರರಿಗೆ ಹಾಗೂ ವಿಶೇಷಚೇತನರಿಗೆ ಮೂಲಭೂತ ಸೌಕರ್ಯ ಕಲ್ಪಿಸಿದ ಬಗ್ಗೆ ನಂದಿಬೇವೂರು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಅವರು ಸಿಇಓ ಅವರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಆಯಾ ತಾಪಂನ ಕಾರ್ಯ ನಿರ್ವಾಹಕ ಅಧಿಕಾರಿಗಳು ಮತ್ತು ಆಯಾ ಪಂಚಾಯಿತಿಗಳ ಪಿಡಿಓ ಅವರು ಇದ್ದರು.

 

 

ಜಾಹೀರಾತು
error: Content is protected !!