November 7, 2025

Hampi times

Kannada News Portal from Vijayanagara

ಘನ, ದ್ರವ ತ್ಯಾಜ್ಯ ನಿರ್ವಹಣೆ: ನಿಯಮ ಪಾಲನೆಗೆ ಜಿಲ್ಲಾಧಿಕಾರಿಗಳ ಸೂಚನೆ

https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹೊಸಪೇಟೆ 
ಘನತ್ಯಾಜ್ಯ ವಸ್ತು ವಿಲೇವಾರಿ ಕುರಿತಂತೆ ರಾಷ್ಟ್ರಿಯ ಹಸಿರು ನ್ಯಾಯಾಧೀಕರಣ ಪೀಠದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ:06/2018ರಲ್ಲಿ ನಗರ ಸ್ಥಳೀಯ ಸಂಸ್ಥೆಗಳು ರಾಷ್ಟಿçÃಯ ಹಸಿರು ನ್ಯಾಯಾಧೀಕರಣದ ನಿರ್ದೇಶನಗಳ
ಪಾಲನೆ ಮಾಡುವ ವಿಷಯದ ಕುರಿತು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳು, ಪರಿಸರ ಇಲಾಖೆ ಮತ್ತು ಜಿಲ್ಲಾ ವಾಯುಮಾಲಿನ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ರಾಷ್ಟಿçÃಯ ಹಸಿರು ನ್ಯಾಯಾಧೀಕರಣದ ನಿರ್ದೇಶನಗಳ ಪಾಲನೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಘನ ಘನತ್ಯಾಜ್ಯ ನಿರ್ವಹಣೆ, ಪಾರಂಪರಿಕ ತ್ಯಾಜ್ಯ ನಿರ್ವಹಣೆ, ದ್ರವ ತ್ಯಾಜ್ಯ ನಿರ್ವಹಣೆಯ ಬಗ್ಗೆ ಮಾನ್ಯ ರಾಷ್ಟಿçÃಯ ಹಸಿರು ನ್ಯಾಯಾಧೀಕರಣದ ನಿರ್ದೇಶನಗಳನ್ನು ಪಾಲಿಸುವ ಸಂಬAಧ ನ್ಯಾಯಾಧೀಕರಣಕ್ಕೆ ಸಲ್ಲಿಸಿರುವ ಅಫಿಡೇವಿಟ್‌ನಲ್ಲಿನ ಅಂಶಗಳನ್ನು ನಿಗದಿತ ಸಮಯದೊಳಗೆ ಕಾರ್ಯಗತಗೊಳಿಸುವಲ್ಲಿ ನಿರ್ಲಕ್ಷö್ಯತನ ತೋರಿದಲ್ಲಿ ಅಂತವರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಮನೋಹರ್, ನಗರಸಭೆಯ ಪೌರಾಯುಕ್ತರು, ಕಾರ್ಯಪಾಲಕ ಅಭಿಯಂತರರಾದÀ ನಾಗರಾಜ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವೀರೇಶ್, ಶಿಲ್ಪಾಶ್ರೀ ಹಾಗೂ ಪರಿಸರ ಅಭಿಯಂತರರಾದ ಜಗದೀಶ್ ಮತ್ತು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

 

 

 

 

 

 

ಜಾಹೀರಾತು
error: Content is protected !!