November 11, 2024

Hampi times

Kannada News Portal from Vijayanagara

ರಕ್ತದಾನ ಮಾಡಿದವರಲ್ಲಿ ಹೊಸ ಚೇತರಿಕೆ ಬರುತ್ತದೆ : ಜಿಪಂ ಸಿಇಒ ಸದಾಶಿವ ಪ್ರಭು

 

https://youtu.be/NHc6OMSu0K4?si=SI_K4goOPEgwo6h2

 

ವಿಶ್ವ ರಕ್ತದಾನಿಗಳ ದಿನ‌: ರಕ್ತದಾನದ ಸಂದೇಶಕ್ಕಾಗಿ ಆರೋಗ್ಯ ಇಲಾಖೆಯಿಂದ ವಿಶೇಷ ಜಾಥಾ

ಹಂಪಿ ಟೈಮ್ಸ್ ಹೊಸಪೇಟೆ

ಇನ್ನೊಬ್ಬರ ಪ್ರಾಣ ಉಳಿಸಲು ನೆರವಾಗುವ ರಕ್ತದಾನದ ಬಗ್ಗೆ ಪ್ರತಿಯೊಬ್ಬರು ಅರಿಯಬೇಕು. ರಕ್ತದಾನ‌ ಮಾಡಿದಲ್ಲಿ ಆರೋಗ್ಯ ಕೆಡುತ್ತದೆ ಎನ್ನುವ ತಪ್ಪು ಕಲ್ಪನೆಯಿಂದ ಹೊರಬರಬೇಕು ಎಂದು ಜಿಪಂ ಸಿಇಒ ಬಿ.ಸದಾಶಿವ ಪ್ರಭು ಹೇಳಿದರು.

ವಿಶ್ವ ರಕ್ತದಾನಿಗಳ ದಿನಾಚರಣೆಯ ನಿಮಿತ್ತ ರಕ್ತದಾನದ ಬಗ್ಗೆ ಸಾರ್ವಜನಿಕರಲ್ಲಿ ವಿಶೇಷ ಸಂದೇಶ ನೀಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ  ವಿಶೇಷ ಜಾಥಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಆರೋಗ್ಯದಿಂದ ಇರುವ ಮತ್ತು ವೈದ್ಯರು ನೀಡುವ ಸಲಹೆಯಂತೆ ರಕ್ತದಾನ ಮಾಡಬಹುದಾಗಿದೆ. ಇದರಿಂದಾಗಿ ರಕ್ತದಾನ ಮಾಡಿದವರಲ್ಲಿ ಹೊಸ ಚೇತರಿಕೆ ಬರುತ್ತದೆ. ಇನ್ನೊಬ್ಬರ ಪ್ರಾಣ ಕಾಪಾಡಿದೆ ಎನ್ನುವ ಹೆಮ್ಮೆ ಬರುತ್ತದೆ. ರಕ್ತದಾನ ಸಮಾಜೋಪಯೋಗಿ ಕಾರ್ಯವಾಗಿದೆ ಎಂದು ಸಲಹೆ ಮಾಡಿದರು.

ಈ ವೇಳೆ ಡಿಎಚ್ಓ ಡಾ.ಶಂಕರ ನಾಯಕ ಮಾತನಾಡಿ, ಜನರಲ್ಲಿ ರಕ್ತದಾನದ ಕುರಿತು ಜಾಗೃತಿ ಮೂಡಿಸುವುದು, ರಕ್ತದಾನಿಗಳಿಗೆ ಕೃತಜ್ಞತೆ ಸಲ್ಲಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳಾದ ಡಾ.ಜಂಬಯ್ಯ, ಡಾ.ದೊಡ್ಡಮನಿ, ಡಾ.ಕಮಲಮ್ಮ ಸೇರಿದಂತೆ ಇನ್ನೀತರ ವೈದ್ಯಾಧಿಕಾರಿಗಳು‌, ಆಶಾ ಕಾರ್ಯಕರ್ತೆಯರು ಮತ್ತು ಇನ್ನೀತರರು ಇದ್ದರು. ನಗರದ ಅಂಬೇಡ್ಕರ್ ವೃತ್ತದಲ್ಲಿ ಜಾಥಾಕ್ಕೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ. ಸದಾಶಿವ ಪ್ರಭು  ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಡಾ.ಅಂಬೇಡ್ಕರ್ ವೃತ್ತದಿಂದ ಹೊರಟ ಜಾಥಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯವರೆಗೆ ಸಾಗಿತು. ಬಳಿಕ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು.

 

 

ಜಾಹೀರಾತು
error: Content is protected !!