December 5, 2024

Hampi times

Kannada News Portal from Vijayanagara

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ದಿವಾಕರ ಅಧಿಕಾರಿಗಳಿಗೆಸೂಚನೆ

 

https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹೊಸಪೇಟೆ
ಜೂನ್ ಮಾಹೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ವಿಜಯನಗರ ಜಿಲ್ಲೆಗೆ ಭೇಟಿ ನೀಡಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸುವುದರಿಂದ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿ ಭವನದ ಕೆಸ್ವಾನ್ ಹಾಲನಲ್ಲಿ ಜೂನ್ 14ರಂದು ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಮಾನ್ಯ ಮುಖ್ಯಮಂತ್ರಿಗಳು ಜಿಲ್ಲಾಮಟ್ಟದ ಕೆಡಿಪಿ ಸಭೆಯಲ್ಲಿ ಭಾಗಿಯಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುತ್ತಿರುವ ಗಂಭೀರತೆಯನ್ನು ಅಧಿಕಾರಿಗಳು ಅರಿಯಬೇಕು. ವಿಜಯನಗರ ಜಿಲ್ಲೆ ನೂತನವಾಗಿ ರಚನೆಯಾಗಿ ಕೆಲವೇ ವರ್ಷಗಳು ಗತಿಸಿದ್ದು, ಜಿಲ್ಲೆಯ ಪ್ರಗತಿಗೆ ವೇಗ ಕೊಡಬೇಕು ಎಂದು ಉದ್ದೇಶಿಸಿ ಜಿಲ್ಲಾ ಉಸ್ತುವಾರಿ ಸಚಿವರ ಮನವಿ ಮೇರೆಗೆ ಮಾನ್ಯ ಮುಖ್ಯಮಂತ್ರಿಗಳು ವಿಜಯನಗರ ಜಿಲ್ಲೆಯ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ವಿಜಯನಗರ ಜಿಲ್ಲೆಯಾದ ಬಳಿಕ ಮುಖ್ಯಮಂತ್ರಿಗಳು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿರುವುದು ವಿಜಯನಗರ ಜಿಲ್ಲೆಯ ಪ್ರಗತಿಯ ಇತಿಹಾಸದಲ್ಲಿ ಹೊಸ ಮೈಲುಗಲ್ಲಾಗಲಿದೆ. ನೂತನ ವಿಜಯನಗರ ಜಿಲ್ಲೆಯ ಪ್ರಗತಿಯ ವೇಗಕ್ಕೆ ಮಾನ್ಯ ಮುಖ್ಯಮಂತ್ರಿಗಳು ನಡೆಸುವ ಸಭೆಯು ಹೊಸ ಮುನ್ನುಡಿ ಬರೆಯಲಿದೆ. ಮತ್ತು ಈ ಸಭೆಯಿಂದಾಗಿ ಪ್ರಗತಿಯ ಕಾರ್ಯಗಳಿಗೆ ವೇಗ ಸಿಗಲಿದೆ. ಈ ವಿಷಯವನ್ನು ಪ್ರತಿಯೊಬ್ಬ ಅಧಿಕಾರಿಗಳು ಅರಿತು ಪ್ರಗತಿ ಪರಿಶೀಲನಾ ಸಭೆಗೆ ಮಾಹಿತಿಯನ್ನು ಸಿದ್ಧಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಭೆಯ ಮಹತ್ವವನ್ನು ತಿಳಿಸಿದರು. ಸಭೆಯಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಯಲಿದೆ. ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಮಾಹಿತಿಯನ್ನು ಶಿಸ್ತುಬದ್ಧವಾಗಿ, ಸ್ಪುಟವಾಗಿ ಸಿದ್ಧಪಡಿಸಿ ತುರ್ತಾಗಿ ಸಲ್ಲಿಸಬೇಕು. ಅಧಿಕಾರಿಗಳು ಮಾಹಿತಿಯನ್ನು ಸರಿಯಾಗಿ ನೀಡಬೇಕು. ತಪ್ಪು ಮಾಹಿತಿಯನ್ನು ನೀಡಬಾರದು ಎಂದು ತಿಳಿಸಿದರು.

ಮಾನ್ಯ ಮುಖ್ಯಮಂತ್ರಿಗಳು ನಡೆಸುವ ಸಭೆಗೆ ಕಡ್ಡಾಯವಾಗಿ ಅಧಿಕಾರಿಗಳೇ ಹಾಜರಿರಬೇಕು. ಮಾನ್ಯ ಮುಖ್ಯಮಂತ್ರಿಗಳು ನಡೆಸುವ ಪ್ರಗತಿ ಪರಿಶೀಲನಾ ಸಭೆಯ ಬಗ್ಗೆ ಅಧಿಕಾರಿಗಳು ನಿರ್ಲಕ್ಷö್ಯ ವಹಿಸಬಾರದು. ಯಾರಾದರು ತಪ್ಪು ಮಾಹಿತಿ ನೀಡಿರುವುದು ಮತ್ತು ಸಭೆಗೆ ಗೈರು ಹಾಜರಾಗಿರುವುದು ಕಂಡು ಬಂದಲ್ಲಿ ಯಾವುದೇ ಮುಲಾಜಿಲ್ಲದೇ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಸದಾಶಿವ ಪ್ರಭು ಬಿ ಅವರು ಮಾತನಾಡಿ, ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದ ಹಾಗೆ ಮಾಹಿತಿಯನ್ನು ಸಿದ್ದಪಡಿಸಬೇಕು. ಓದಲು ಮತ್ತು ತಿಳಿಯಲು ಅನುಕೂಲವಾಗುವಂತೆ ಸರಿಯಾದ ಮಾದರಿಯಲ್ಲಿ ಮಾಹಿತಿಯನ್ನು ಸಿದ್ಧಪಡಿಸಿ ನೀಡಬೇಕು. ಸಭೆ ನಡೆಸುವಾಗ ಬರಬಹುದಾದ ಅನಿರೀಕ್ಷಿತ ಪ್ರಶ್ನೆಗಳಿಗೆ ಸ್ಥಳದಲ್ಲಿಯೇ ಉತ್ತರಿಸುವ ಹಾಗೆ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಪ್ರತಿಯೊಂದು ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಅನ್ನದಾನೇಶ್ವರ ಸ್ವಾಮಿ ಜೆ.ಎಂ., ವಿಜಯನಗರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಈರಣ್ಣ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ಧೇಶಕರಾದ ರಾಮಚಂದ್ರಪ್ಪ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಅಧಿಕಾರಿ ಡಾ.ಶಂಕರ ನಾಯಕ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಸೇರಿದಂತೆ ಇನ್ನೀತರ ಇಲಾಖೆಯ ಅಧಿಕಾರಿಗಳು ಇದ್ದರು.

 

 

ಜಾಹೀರಾತು
error: Content is protected !!