December 5, 2024

Hampi times

Kannada News Portal from Vijayanagara

ಕಾಂಗ್ರೆಸ್ ಅನ್ನಪೂರ್ಣಮ್ಮಗೆ ಗೆಲುವು ನಿಶ್ಚಿತ : ಪುರಸಭೆ ಅಧ್ಯಕ್ಷ ಎಂ.ಮರಿರಾಮಣ್ಣ ಅಭಿಮತ

 

https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್‌ ಸಂಡೂರು

ಸಂಡೂರಿನಲ್ಲಿ ನಿಕಟಪೂರ್ವ ಶಾಸಕ ಈ ತುಕಾರಾಂ ಅವರು ಕೈಗೊಂಡ ಅಭೂತಪೂರ್ವ ಅಭಿವೃದ್ಧಿ ಕಾರ್ಯಗಳಿಂದಾಗಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಗೆಲುವು ನಿಶ್ಚಿತ ಎಂದು ಹಗರಿಬೊಮ್ಮನಹಳ್ಳಿ ಪುರಸಭೆ ಅಧ್ಯಕ್ಷ ಎಂ.ಮರಿರಾಮಣ್ಣ ತಿಳಿಸಿದರು.

ಸಂಡೂರು ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಪರ ಜೈ ಸಿಂಗ್ಪುರದಲ್ಲಿ ಪ್ರಚಾರ ನಡೆಸಿ ಮಾತನಾಡಿದರು. ರಾಜ್ಯ ಸರ್ಕಾರ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅತ್ಯಂತ ಉತ್ತಮ ಆಡಳಿತ ನೀಡುತ್ತಿದೆ. ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳನ್ನ ಈಡೇರಿಸಿದ ದೇಶದ ಮೊದಲ ಸರ್ಕಾರ ಎಂಬ ಹಿರಿಮೆ ಕಾಂಗ್ರೆಸ್ ಸರಕಾರಕ್ಕೆ ಇದೆ. ಕೇವಲ ಧರ್ಮ ಮತ್ತು ಜಾತಿ ನಡುವೆ ಕಲಹ ಬಿತ್ತುತ್ತ ದೇಶದಲ್ಲಿ ಅಶಾಂತಿಯನ್ನು ಉಂಟುಮಾಡುತ್ತಿರುವ ಬಿಜೆಪಿಯನ್ನು ಮತದಾರರು ತಿರಸ್ಕರಿಸುವುದು ನಿಶ್ಚಿತವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು ಸೊಂಡೂರಿನಲ್ಲಿಯೂ ಅಭಿವೃದ್ಧಿಯ ಹೊಳೆಹರಿದು ಬರಲಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಅನ್ನಪೂರ್ಣ ಅವರನ್ನು ಮತದಾರರು ಅತ್ಯಂತ ಪ್ರಚಂಡ ಬಹುಮತದಿಂದ ಆರಿಸಿ ತರುವುದು ನಿಶ್ಚಿತವಾಗಿದೆ. ಜೊತೆಗೆ ಕ್ಷೇತ್ರದಲ್ಲಿ ಎರಡು ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಇಂದಿನ ಕೆಎಂಎಫ್ ಅಧ್ಯಕ್ಷ ಎಸ್.ಭೀಮನಾಯಕ್ ಅವರು ನಿರಂತರವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುವ ಮೂಲಕ ಮತದಾರರ ಒಲವು ಪಡೆಯುತ್ತಿದ್ದಾರೆ ಎಂದರು.

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚಿಂತರಪಲ್ಲಿ ದೇವೇಂದ್ರಪ್ಪ ಮಾತನಾಡಿ, ಕ್ಷೇತ್ರದಲ್ಲಿ ಸಂತೋಷ್ ಲಾಡ್ ಅವರು ಇಂದಿಗೂ ಜನರ ಅಭಿಮಾನವನ್ನು ಉಳಿಸಿಕೊಂಡಿದ್ದಾರೆ. ಬಡ ಜನರ ಮನೆಯ ಮಗನಾಗಿ ಸಂತೋಷ್ ಲಾಡ್ ನಿರಂತರವಾಗಿ ಶ್ರಮಿಸಿದ್ದು ಅನ್ನಪೂರ್ಣ ಅವರ ಗೆಲುವಿಗೆ ಸಹಕಾರಿಯಾಗಿದೆ. ಸಂತೋಷ್ ಲಾಡ್ ಮತ್ತು ತುಕಾರಾಮ ಅವರು ಪರಸ್ಪರ ಅಭಿವೃದ್ಧಿ ಕಾರ್ಯಗಳಲ್ಲಿ ಕ್ಷೇತ್ರವನ್ನು ಮುನ್ನಡೆಸಿದ್ದಾರೆ. ಜೊತೆಗೆ ಜನತೆಗೆ ವೈಯಕ್ತಿಕವಾಗಿಯೂ ಸಹಾಯ ಹಸ್ತ ಚಾಚಿದ್ದಾರೆ ಎಂದರು. ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಗೋಣಿ ಬಸಪ್ಪ ಕೆಪಿಸಿಸಿ ವಕ್ತಾರ ಪತ್ರೇಶ್ ಹಿರೇಮಠ ಮಾತನಾಡಿದರು. ಎಪಿಎಂಸಿ ಮಾಜಿ ನಿರ್ದೇಶಕ ಬಾಲಕೃಷ್ಣ ಬಾಬು, ಕೆಎಂಎಫ್ ಅಧ್ಯಕ್ಷರ ಆಪ್ತ ಸಹಾಯಕ ಗೆದ್ದಲಘಟ್ಟಿ ಸೋಮಶೇಖರ್, ಪುರಸಭೆ ಸದಸ್ಯ ಉಪ್ಪಾರ್ ಬಾಳಪ್ಪ, ಮುಖಂಡರಾದ ಮೇಟಿ ಮಂಜುನಾಥ ಇತರರಿದ್ದರು.

 

 

ಜಾಹೀರಾತು
error: Content is protected !!