July 17, 2025

Hampi times

Kannada News Portal from Vijayanagara

 ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನ

????????????????????????????????????

https://youtu.be/NHc6OMSu0K4?si=SI_K4goOPEgwo6h2

 

ಹಂಪಿ ಟೈಮ್ಸ್ ಬಳ್ಳಾರಿ
ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಿಂದ 3 ವರ್ಷಗಳ ಅವಧಿಗೆ ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ 01.07.2022 ರಿಂದ 30.06.2025 ರ ವರೆಗೆ ಪ್ಯಾನೆಲ್ ವಕೀಲರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಈ ಹುದ್ದೆಗಳ ಅವಧಿಯು 30.06.2025 ರಂದು ಮುಕ್ತಾಯಗೊಳ್ಳಲಿದೆ. ಮುಂದಿನ ಮೂರು ವರ್ಷಗಳ ಅವಧಿಗೆ (01.07.2025 ರಿಂದ 30.06.2028 ರ ವರೆಗೆ) ಪ್ಯಾನೆಲ್ ವಕೀಲರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿಸಿಕೊಂಡಿರಬೇಕು. ಕಾನೂನು ಅಭ್ಯಾಸದಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು. ಮಾನ್ಯತೆವುಳ್ಳ ಅಭ್ಯಾಸ ಪ್ರಮಾಣಪತ್ರ ಹೊಂದಿರಬೇಕು. ಕ್ರಿಮಿನಲ್ ಪ್ರಕರಣ ಹೊಂದಿರಬಾರದು. ಸ್ಥಳೀಯ ಭಾಷೆಯ ಜ್ಞಾನ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಮೇ 3 ಕೊನೆಯ ದಿನವಾಗಿದೆ. ಸಂದರ್ಶನ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಅಥವಾ ದೂ.08392-278077  ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

 

ಜಾಹೀರಾತು
error: Content is protected !!