
HAMPI TIMES

ಕೊಪ್ಪಳ: ಕರ್ನಾಟಕ ರಾಜ್ಯ ನೋಟರಿಗಳ ಸಂಘದಿಂದ ಡಿ.10 ರಂದು ಅಂಕೋಲಾದ ವಾಸುದೇವ ಕಲ್ಯಾಣ ಮಂಟಪದಲ್ಲಿ ರಾಜ್ಯ ನೋಟರಿಗಳ 13ನೇ ರಾಜ್ಯ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಅಖಿಲ ಭಾರತ ನೋಟರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಆಸೀಫ್ ಅಲಿ ಹೇಳಿದರು.

ನಗರದ ಮೀಡಿಯಾ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನವನ್ನು ಅಂದು ಬೆಳಗ್ಗೆ 10.30ಕ್ಕೆ ನ್ಯಾ. ಎಚ್.ಟಿ.ನರೇಂದ್ರ ಪ್ರಸಾದ ಉದ್ಘಾಟಿಸಲಿದ್ದಾರೆ. ನ್ಯಾ. ಚಂದ್ರಶೇಖರ್ ಎಂ ಜೋಷಿ ಉಪಸ್ಥಿತಿ ಇರಲಿದ್ದು, ರಾಜ್ಯ ನೋಟರಿಗಳ ಸಂಘದ ಅಧ್ಯಕ್ಷ ಎನ್.ಕೋಟೇಶ್ವರ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾನೂನು ಸಚಿವ ಮಾಧುಸ್ವಾಮಿ, ಕಾರ್ಮಿಕ ಸಚಿವ ಅರಬೈಲ್ ಶಿವರಾಮ್ ಹೆಬ್ಬಾರ್, ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕಿ ರೂಪಾಲಿ ಎಸ್. ನಾಯ್ಕ ಉಪಸ್ಥಿತರಿರಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದರು. ನೋಟರಿಗಳ ಸಂಘದ ತಾಲೂಕು ಅಧ್ಯಕ್ಷ ಆರ್.ವಿ.ಮಠದ್, ಉಪಾಧ್ಯಕ್ಷ ನೀಲಪ್ಪ, ಕಾರ್ಯದರ್ಶಿ ಪ್ರಕಾಶ್, ಖಜಾಂಚಿ ಎಸ್.ಬಿ.ಪಾಟೀಲ್ ಇದ್ದರು.


More Stories
ರಾಜ್ಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಹೊಸಪೇಟೆಯ ಪಿ.ಎಂ. ಶ್ರೀವರ್ಧನ್ ರೆಡ್ಡಿಗೆ ಪ್ರಥಮ ಸ್ಥಾನ
ಕ್ರೀಡೆಗಳು ಬಂದಿಗಳಲ್ಲಿ ಮಾನಸಿಕ ಉಲ್ಲಾಸ, ಸಕಾರಾತ್ಮಕ ಬದಲಾವಣೆ ತರಲು ಸಹಕಾರಿ: ಮಧುಸೂದನ್
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹೊಸಪೇಟೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ