https://youtu.be/NHc6OMSu0K4?si=SI_K4goOPEgwo6h2

ವಿಜಯನಗರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಂದ ನಾಮಪತ್ರ ಸಲ್ಲಿಸಿದ್ದ 69 ಜನ ಅಭ್ಯರ್ಥಿಗಳ ಪೈಕಿ ಒಟ್ಟು 14 ಜನ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೆಂಕಟೇಶ್ ಟಿ. ತಿಳಿಸಿದ್ದಾರೆ.
ಕ್ಷೇತ್ರವಾರು ನಾಮಪತ್ರ ಹಿಂಪಡೆದ ಅಭ್ಯರ್ಥಿಗಳು ವಿವರ:
88-ಹೂವಿನಹಡಗಲಿ ವಿಧಾನಸಭಾ ಕ್ಷೇತ್ರ(ಒಬ್ಬ ಅಭ್ಯರ್ಥಿ):
ಹೂವಿನಹಡಗಲಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದ 9 ಜನ ಅಭ್ಯರ್ಥಿಗಳ ಪೈಕಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕೆ.ಉಚ್ಚಂಗೆಪ್ಪ ಅವರು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ.
89-ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ(4 ಜನ ಅಭ್ಯರ್ಥಿಗಳು):
ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದ 16 ಜನ ಅಭ್ಯರ್ಥಿಗಳ ಪೈಕಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ವಿಜಯ ನಾಯ್ಕ, ಪರಮೇಶ್ವರ ಎಲ್., ಗೀತಾ ಬಿ. ಹಾಗೂ ಆದರ್ಶ ಎಲ್. ಅವರು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ.

90-ವಿಜಯನಗರ ವಿಧಾನಸಭಾ ಕ್ಷೇತ್ರ(ಒಬ್ಬ ಅಭ್ಯರ್ಥಿ):
ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದ 13 ಜನ ಅಭ್ಯರ್ಥಿಗಳ ಪೈಕಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಹೆಚ್.ಜಿ.ವಿರುಪಾಕ್ಷಿ ಅವರು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ.
96-ಕೂಡ್ಲಿಗಿ ವಿಧಾನಸಭಾ ಕ್ಷೇತ್ರ(4 ಜನ ಅಭ್ಯರ್ಥಿಗಳು):
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದ 12 ಜನ ಅಭ್ಯರ್ಥಿಗಳ ಪೈಕಿ ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಬಂಗಾರಿ ಹನುಮಂತ, ರಾಘವೇಂದ್ರ ಗುರಿಕಾರ್, ಕೆ. ಲಲಿತಾ ಹಾಗೂ ಬಿ. ಹುಲಿಕುಂಟೆಪ್ಪ ಅವರು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ.
104-ಹರಪನಹಳ್ಳಿ ವಿಧಾನಸಭಾ ಕ್ಷೇತ್ರ(4 ಜನ ಅಭ್ಯರ್ಥಿಗಳು):
ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದ 19 ಜನ ಅಭ್ಯರ್ಥಿಗಳ ಪೈಕಿ ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಬಿ.ಆರ್.ಕೃಷ್ಣ ನಾಯ್ಕ, ಬೇಲ್ದಾರ್ ಬಾಷಾಸಾಬ್, ವೀಣಾ ಮಹಾಂತೇಶ ಹಾಗೂ ಪ್ರಭಾಕರ್ ಎಸ್. ಅವರು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ.



More Stories
ಬಿಡಿಸಿಸಿ ಬ್ಯಾಂಕ್ ಗೆ ₹13.08 ಕೋಟಿ ನಿವ್ವಳ ಲಾಭ : ಕೆ.ತಿಪ್ಪೇಸ್ವಾಮಿ
ಎಂ.ಪಿ. ಪ್ರಕಾಶ ಅಧಿಕಾರಕ್ಕಿಂತ ಮೌಲ್ಯಗಳಿಗೆ ಬೆಲೆ ನೀಡಿದ ಮಹಾನ್ ನಾಯಕ: ಮಾಜಿ ಸಿಎಂ ಸಿದ್ದರಾಮಯ್ಯ
ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ