October 12, 2026

Hampi times

Kannada News Portal from Vijayanagara

ಮೇ.23ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ – ನಿಷೇಧಾಜ್ಞೆ ಜಾರಿ : ಡಿಸಿ ಟಿ.ವೆಂಕಟೇಶ

ಹಂಪಿ ಟೈಮ್ಸ್ ಹೊಸಪೇಟೆ:
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮೇ.23 ರಿಂದ ಜೂ.3ರವರೆಗೆ ಹೊಸಪೇಟೆ ತಾಲೂಕಿನ 7 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯ ವಿವಿಧೆಡೆ ನಡೆಯಲಿದ್ದು,  ಜಿಲ್ಲಾಡಳಿತ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ದತೆ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ನೊಂದಣಿ ಸಂಖ್ಯೆ ದಾಖಲಿಸಿ ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಪರೀಕ್ಷೆಗೆ ಸಂಬಂಧಿಸಿದ ಪತ್ರಿಕೆಗಳ ವಿತರಣೆ ವೇಳೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಿ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

Please follow and like us:

 

 

Translate »
[t4b-ticker]