https://youtu.be/NHc6OMSu0K4?si=SI_K4goOPEgwo6h2

ಹಂಪಿಟೈಮ್ಸ್ ಹೊಸಪೇಟೆ:
ವಿಜಯನಗರ ಜಿಲ್ಲೆಯನ್ನು ಸಂಪೂರ್ಣವಾಗಿ ಹಸಿರುಗೊಳಿಸಲು ಪ್ರತಿಯೊಬ್ಬರು ಸಸಿನೆಟ್ಟು ನೀರೆರೆದು ಪೋಷಿಸಬೇಕು. ಬೇಸಿಗೆ ಕಾಲದಲ್ಲಿ ನೆರಳು ಕೊಡುವ ಮರಗಳು, ಸಕಾಲಕ್ಕೆ ಭೂಮಿಗೆ ಮಳೆಯನ್ನುತರಿಸುತ್ತವೆ. ನಾವು ನೆಡುವ ಸಸಿಗಳು ಲಕ್ಷಾಂತರ ಜನರಿಗೆ ನೇರ ಹಾಗೂ ಪರೋಕ್ಷವಾಗಿ ಉಪಕಾರವಾಗುತ್ತವೆ ಎಂಬುದನ್ನು ಪ್ರತಿಯೊಬ್ಬರು ತಿಳಿಯಬೇಕು ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.

ನಗರದ ವಿಜಯನಗರ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಸಹಯೋಗದೊಂದಿಗೆ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆಯಲ್ಲಿ ಶಾಸಕ ಗವಿಯಪ್ಪ ಸಸಿನೆಟ್ಟು ನೀರೆರೆದು ಮಾತನಾಡಿದರು. ಉತ್ತಮ ಆರೋಗ್ಯಕ್ಕೆ ಪರಿಸರ ಸಂರಕ್ಷಣೆ ಅತ್ಯಗತ್ಯ. ಪ್ರತಿ ವಿದ್ಯಾರ್ಥಿಗಳು ಗಿಡ ನೆಡುವ ಮೂಲಕ ಹಸಿರು ಜಿಲ್ಲೆಯಾಗಲು ತಮ್ಮ ಕೊಡುಗೆ ನೀಡಬೇಕು ಎಂದರು. ನಂತರ ಶಾಲಾ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿದರು.
ಅರಣ್ಯ ಇಲಾಖೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಅದಕ್ಕೆ ಸುರಕ್ಷಿತ ಬೇಲಿಗಳನ್ನು ಹಾಕಲಾಯಿತು.
ಜಿಲ್ಲಾಧಿಕಾರಿ ವೆಂಕಟೇಶ್ ಟಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಉಪವಿಭಾಗಾಧಿಕಾರಿ ಸಿದ್ಧರಾಮೇಶ್ವರ, ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಲ್‌ನ್, ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ವಿನಯ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ನಾಗರಾಜ್ ಕೆ.ಎಂ, ಉಪ ವಲಯ ಅರಣ್ಯಾಧಿಕಾರಿ ಶಿವಕುಮಾರ್ ಜಿ., ಕುಮಾರ ಸ್ವಾಮಿ, ಶಂಕರ್, ಪುಷ್ಪಾಂಜಲಿ ಬಿ.ಎಂ. ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.



More Stories
ಸೋಷಿಯಲ್ ಮೀಡಿಯಾ: ಕಣ್ಣಿಗೆ ಆಕರ್ಷಕ, ಮನಸ್ಸಿಗೆ ಮಾರಕ!
ಉದ್ಯಮಿ ಕೆ.ರವಿಶಂಕರ್ ಜನ್ಮದಿನದ ಸಾರ್ಥಕ ಸೇವೆ: ಆಸ್ಪತ್ರೆಯ ರೋಗಿಗಳಿಗೆ ಪೌಷ್ಟಿಕಾಹಾರ ವಿತರಣೆ
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್, ಕೋಟ್ಯಂತರ ರೂಪಾಯಿ ರಾಜಸ್ವ ಸಂಗ್ರಹ : ಅಬಕಾರಿ ನಿರೀಕ್ಷಕಿ ಎಸ್.ಬಿ.ಮಮತಾ