https://youtu.be/NHc6OMSu0K4?si=SI_K4goOPEgwo6h2



ಹಂಪಿ ಟೈಮ್ಸ್ ಕೊಪ್ಪಳ:

2023ನೇ ಸಾಲಿನ “ವಿಶ್ವ ರೇಬಿಸ್ ದಿನಾಚರಣೆ” ಅಂಗವಾಗಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಕೊಪ್ಪಳ ಪಾಲಿಕ್ಲಿನಿಕ್ ವತಿಯಿಂದ ಸಾಕು ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮವು ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 27ರ ಒಂದು ತಿಂಗಳವರೆಗೆ ಹಮ್ಮಿಕೊಳ್ಳಲಾಗಿದೆ.
ಈ ಲಸಿಕೆಯು ಸಾಕಿದ ನಾಯಿಗಳಿಗೆ ಮಾತ್ರವಾಗಿದ್ದು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಕೊಪ್ಪಳ ಪಾಲಿಕ್ಲಿನಿಕ್‌ನಲ್ಲಿ ಸಾರ್ವಜನಿಕರು ತಮ್ಮ ಸಾಕು ನಾಯಿಗಳಿಗೆ ಉಚಿತವಾಗಿ ರೇಬಿಸ್ ಲಸಿಕೆಯನ್ನು ಹಾಕಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08539-299906ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಪಾಲಿಕ್ಲಿನಿಕ್ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Please follow and like us:


More Stories
ಸಮಾಜದಲ್ಲಿ ಮಕ್ಕಳನ್ನು ಸುರಕ್ಷಿತವಾಗಿಡುವುದು ಶಿಕ್ಷಕರ ಮೂಲಭೂತ ಕರ್ತವ್ಯ
ಹಣಕಾಸು ಇಲಾಖೆಯಿಂದ ಸಿಎಂಗೆ ಎಚ್ಚರಿಕೆ
ಹಳ್ಳಿ ಮಕ್ಕಳಿಗೆ ಕಿಯೋ ಕಂಪ್ಯೂಟರ್ ಮೂಲಕ ಎಐ ತಂತ್ರಜ್ಞಾನ