ಹಂಪಿ ಟೈಮ್ಸ್ ಕೊಪ್ಪಳ:
ಕೊಪ್ಪಳ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಕಚೇರಿಯ ವ್ಯಾಪ್ತಿಯಲ್ಲಿ ಬರುವ ಕೊಪ್ಪಳ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ 1 ರಿಂದ 10ನೇ ತರಗತಿ ಹೊಸ ವಿದ್ಯಾರ್ಥಿಗಳು ವೆಬ್ ಸೈಟ್ https://ssp.karnataka.gov.in/ ssp2324/homepage.aspx ನಲ್ಲಿ ಅಕ್ಟೋಬರ್ 20ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಕಳೆದ ವರ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡಿದ್ದರೆ ಹೊಸ ಅರ್ಜಿ ಸಲ್ಲಿಸಬೇಕು. ಕಳೆದ ವರ್ಷ ವಿದ್ಯಾರ್ಥಿವೇತನ ಯಶಸ್ವಿಯಾಗಿ ಜಮಾ ಆಗಿದ್ದರೆ ಹೊಸದಾಗಿ ಅರ್ಜಿ ಸಲ್ಲಿಸುವುದು ಅಗತ್ಯವಿರುವುದಿಲ್ಲ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ರವರ ಕಚೇರಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Please follow and like us:


More Stories
ಹಂಪಿ ಸಂರಕ್ಷಣೆ, ಸ್ಥಳೀಯರನ್ನು ಹೊರಗಿಟ್ಟರೆ ಜೀವಂತ ಪರಂಪರೆ ಉಳಿಯಲ್ಲ ಎಂದ ಐಕೋಮೋಸ್ ತಜ್ಞರು
ಕೆರೆಯ ಪುನರುಜ್ಜೀವನಕ್ಕಾಗಿ ಶ್ರಮಿಸಿದ ಅಂಚೆ ಕೊಟ್ರೇಶ್
ಅ.21 ಬನ್ನಿ ಮುಡಿಯುವ ಉತ್ಸವ, ಪೇಟೆ ಬಸವೇಶ್ವರ ಉತ್ಸವ ಮೂರ್ತಿ ಮೆರವಣಿಗೆ: ಗೊಗ್ಗ ಚನ್ನಬಸವರಾಜ