https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಹೊಸಪೇಟೆ :
ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ವ್ಯವಸ್ಥಾಪಕ ಕೆ. ಭೀಮಪ್ಪ ಅವರು ತಿಳಿಸಿದ್ದಾರೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಶೈಕ್ಷಣಿಕ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಸೌಲಭ್ಯ ಪಡೆಯಲು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು, ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಅರ್ಜಿ ಸಲ್ಲಿಸಬೇಕು, ಸೇವಾಸಿಂಧು ಪೋರ್ಟಲ್ ಮೂಲಕ ನ.3ರೊಳಗೆ ಅರ್ಜಿ ಸಲ್ಲಿಸಬೇಕು, ಬೆಂಗಳೂರು-ಒನ್, ಕರ್ನಾಟಕ-ಒನ್, ಅಟಲ್-ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ http:upparadevelopment.







More Stories
ತ್ಯಾಗದ ಫಲವೇ ಭಾರತದ ಸ್ವಾತಂತ್ರ್ಯ…….
ಆಗಸ್ಟ್ 14ರಂದು ಹೊಸಪೇಟೆಯಲ್ಲಿ “ನಾ… ಏರಿದ ಎತ್ತರಕ್ಕೆ…!!” ಕೃತಿ ಲೋಕಾರ್ಪಣೆ
34 ವರ್ಷಗಳ ಸೇವೆ: ನಿಂಬಳಗೆರೆ ಇಂಗ್ಲಿಷ್ ಶಿಕ್ಷಕ ಎಂ.ಬಿ. ನಾಗರಾಜ್ಗೆ ಬೀಳ್ಕೊಡುಗೆ