https://youtu.be/NHc6OMSu0K4?si=SI_K4goOPEgwo6h2

ಎಸ್‌ಬಿಬಿಎನ್‌ಎಸ್ ಬಿ.ಈಡಿ ಕಾಲೇಜ್ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆ
ಹಂಪಿ ಟೈಮ್ಸ್ ಹೊಸಪೇಟೆ
ನಗರದ ಷಾ.ಭವರಲಾಲ್ ಬಾಬುಲಾಲ್ ನಾಹರ್ ಶಿಕ್ಷಣ ಮಹಾವಿದ್ಯಾಲಯದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಗುಡೇಕೋಟೆ ನಾಗರಾಜ ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಕಾರ್ಯಕಾರಿ ಸಮಿತಿಯ ತೀರ್ಮಾನದಂತೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಪಿಡಿಐಟಿ ಮಹಾವಿದ್ಯಾಲಯದ ನೂತನ ಅಧ್ಯಕ್ಷ ಕಲ್ಗುಡಿ ಮಂಜುನಾಥ, ಮುನಿರಾಬಾದನ ವಿಜಯನಗರ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತ ಪ್ರೌಢಶಾಲೆಗಳ ಅಧ್ಯಕ್ಷ ಜಾಲಿ ಪ್ರಕಾಶ, ವೀ.ವಿ.ಸಂಘದ ಹಾಗೂ ಇತರ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಅಜೀವ ಸದಸ್ಯರು, ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರು ಸನ್ಮಾನಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಎನ್.ವಿಶ್ವನಾಥಗೌಡ ಸ್ವಾಗತಿಸಿದರು. ಐ.ಕ್ಯೂ.ಎಸ್.ಸಿ ಸಂಯೋಜಕರು, ವಿದ್ಯಾರ್ಥಿ ಸಂಘದ ಸಂಚಾಲಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.




More Stories
ಸೋಷಿಯಲ್ ಮೀಡಿಯಾ: ಕಣ್ಣಿಗೆ ಆಕರ್ಷಕ, ಮನಸ್ಸಿಗೆ ಮಾರಕ!
ಉದ್ಯಮಿ ಕೆ.ರವಿಶಂಕರ್ ಜನ್ಮದಿನದ ಸಾರ್ಥಕ ಸೇವೆ: ಆಸ್ಪತ್ರೆಯ ರೋಗಿಗಳಿಗೆ ಪೌಷ್ಟಿಕಾಹಾರ ವಿತರಣೆ
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್, ಕೋಟ್ಯಂತರ ರೂಪಾಯಿ ರಾಜಸ್ವ ಸಂಗ್ರಹ : ಅಬಕಾರಿ ನಿರೀಕ್ಷಕಿ ಎಸ್.ಬಿ.ಮಮತಾ