https://youtu.be/NHc6OMSu0K4?si=SI_K4goOPEgwo6h2



ಹಂಪಿ ಟೈಮ್ಸ್ ಹೊಸಪೇಟೆ : ಗಣೇಶ ಚತುರ್ಥಿಯ ಮೂರನೇ ದಿನದ ವಿಸರ್ಜನೆ ಕಾರ್ಯಕ್ರಮವು ಶುಕ್ರವಾರ ವಿಜಯನಗರ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ನಡೆಯುವಂತೆ ಪೊಲೀಸ್ ಇಲಾಖೆಯು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಒಟ್ಟು 1462 ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯವು ಸುಸೂತ್ರವಾಗಿ ಜರುಗುವಂತೆ ಅಗತ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಎಸ್ಪಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.


ಜಿಲ್ಲೆಯಲ್ಲಿ ಗಣೇಶ ವಿಸರ್ಜನೆಗೆ ಹೆಚ್ಚಿನ ಜನರು ಸೇರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದ್ದು, ಒಟ್ಟು 3 ಡಿವೈಎಸ್ಪಿ, 13 ಪೊಲೀಸ್ ಇನ್ಸ್‌ಪೆಕ್ಟರ್‌ಗಳು, 800ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಹೋಂ ಗಾರ್ಡ್‌ಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ಮೆರವಣಿಗೆ ಸಂದರ್ಭದಲ್ಲಿ ಸಂಚಾರ ನಿರ್ವಹಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಇದರ ಜೊತೆಗೆ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು 3 ಕೆ.ಎಸ್.ಆರ್.ಪಿ (ಕರ್ನಾಟಕ ರಾಜ್ಯ ಮೀಸಲು ಪೊಲೀಸ್) ತುಕಡಿಗಳನ್ನು ನಿಯೋಜಿಸಲಾಗಿದ್ದು, ಇದು ಭದ್ರತಾ ವ್ಯವಸ್ಥೆಗೆ ಮತ್ತಷ್ಟು ಬಲ ತುಂಬಿದೆ. ಗಣೇಶ ವಿಸರ್ಜನಾ ಕಾರ್ಯಕ್ರಮವು ಸುಗಮವಾಗಿ ಮತ್ತು ಯಾವುದೇ ತೊಂದರೆಯಿಲ್ಲದೆ ಸಂಪನ್ನಗೊಳ್ಳುವಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಸಂಪೂರ್ಣ ಸಿದ್ಧತೆ ನಡೆಸಿದೆ.


More Stories
ಸಮಾಜದಲ್ಲಿ ಮಕ್ಕಳನ್ನು ಸುರಕ್ಷಿತವಾಗಿಡುವುದು ಶಿಕ್ಷಕರ ಮೂಲಭೂತ ಕರ್ತವ್ಯ
ಹಣಕಾಸು ಇಲಾಖೆಯಿಂದ ಸಿಎಂಗೆ ಎಚ್ಚರಿಕೆ
ಹಳ್ಳಿ ಮಕ್ಕಳಿಗೆ ಕಿಯೋ ಕಂಪ್ಯೂಟರ್ ಮೂಲಕ ಎಐ ತಂತ್ರಜ್ಞಾನ