https://youtu.be/NHc6OMSu0K4?si=SI_K4goOPEgwo6h2

- ಮೂರು ಐಎಎಸ್ ಅಧಿಕಾರಿಗಳ ವರ್ಗಾವಣೆ; ರಂದೀಪ್‌ಗೆ ಹೆಚ್ಚುವರಿ ಜವಾಬ್ದಾರಿ, ಇಬ್ಬರಿಗೆ ಡಿಸಿ ಹುದ್ದೆ
- ರಾಜ್ಯದಲ್ಲಿ ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ.
- ರಂದೀಪ್ ಡಿ. ಅವರಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಹೆಚ್ಚುವರಿ ಹೊಣೆ.
- ಕವಿತಾ ಎಸ್. ಮಣ್ಣಿಕೇರಿ ವಿಜಯನಗರ ಜಿಲ್ಲಾಧಿಕಾರಿಯಾಗಿ ನೇಮಕ.
- ನಾಗೇಂದ್ರಪ್ರಸಾದ್ ಕೆ. ಬಳ್ಳಾರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ.
ಹಂಪಿ ಟೈಮ್ಸ್ ಹೊಸಪೇಟೆ:
ರಾಜ್ಯ ಸರ್ಕಾರದ ಆಡಳಿತಾತ್ಮಕ ಕಾರ್ಯಗಳಿಗೆ ಮತ್ತಷ್ಟು ಚುರುಕು ನೀಡುವ ಉದ್ದೇಶದಿಂದ ಮೂವರು ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಂದೀಪ್ ಡಿ. ಅವರಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಹೆಚ್ಚುವರಿ ಆಯುಕ್ತರ ಜವಾಬ್ದಾರಿ ನೀಡಲಾಗಿದೆ.


ಕಾಯ್ದಿರಿಸಿದ್ದ ಕವಿತಾ ಎಸ್. ಮಣ್ಣಿಕೇರಿ ಕೇರಿ ಅವರನ್ನು ವಿಜಯನಗರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಇದುವರೆಗೂ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎಸ್. ದಿವಾಕರ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಹುದ್ದೆ ಸೂಚಿಸದೆ ಕಾಯ್ದಿರಿಸಲಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರಾಗಿದ್ದ ನಾಗೇಂದ್ರಪ್ರಸಾದ್ ಕೆ. ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಇಲ್ಲಿಯವರೆಗೆ ಬಳ್ಳಾರಿಯಲ್ಲಿದ್ದ ಪ್ರಶಾಂತ್ ಕುಮಾರ್ ಮಿಶ್ರ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶಿಸಿದೆ.
ಈ ಮೂವರು ಹಿರಿಯ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ಕರ್ನಾಟಕ ಸರ್ಕಾರದ ಅಧೀನ ಕಾರ್ಯದರ್ಶಿ (ಸೇವೆಗಳು-1) ಟಿ. ಮಹಂತೇಶ್ ಅವರು ಹೊರಡಿಸಿದ್ದಾರೆ. ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಈ ಅಧಿಕಾರಿಗಳು ತಮ್ಮ ಹೊಸ ಹುದ್ದೆಗಳಲ್ಲಿ ಮುಂದುವರೆಯಲಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



More Stories
ಕ್ರೀಡಾ ಜಗತ್ತಿಗೆ ಸ್ಫೂರ್ತಿ ಭಾರತದ ಮಹಿಳಾ ಆರ್ಚರಿ ಪಟು ಪಾಯಲ್ ನಾಗ್
ಬ್ರಿಡ್ಜ್ ಟು ಬೆಂಗಳೂರು’ ಮೂಲಕ ನವಶಕ್ತಿಯ ಅನಾವರಣ
ಹಾರ್ಮುಜ್ ಜಲಸಂಧಿ ಮುಕ್ತ