January 15, 2026

Hampi times

Kannada News Portal from Vijayanagara

ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಕಲೋತ್ಸವ ಸೂಕ್ತ ವೇದಿಕೆ

https://youtu.be/NHc6OMSu0K4?si=SI_K4goOPEgwo6h2

 

ಹಂಪಿ ಟೈಮ್ಸ್‌ ಹೊಸಪೇಟೆ

ಮಕ್ಕಳಲ್ಲಿನ ಸುಪ್ತ ಪ್ರತಿಭೆಗಳನ್ನು ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಅನಾವರಣಗೊಳಿಸಲು ಜಿಲ್ಲಾ ಮಟ್ಟದಲ್ಲಿ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಪ್ರಮುಖ ಪಾತ್ರ ವಹಿಸಿದೆ ಎಂದು ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ ಹೇಳಿದರು.

ಇದನ್ನೂ ಓದಿ: ನಿಶಾ ಐಎಫ್‌ಎಸ್‌ಗೆ ಆಯ್ಕೆ ಗ್ರಾಮೀಣ ಪ್ರತಿಭೆ ಯುಪಿಎಸ್ ಸಿ ಪರೀಕ್ಷೆಯಲ್ಲಿ ಸಾಧನೆ

ನಗರದ ಶ್ರೀಮಾರ್ಕಂಡೇಶ್ವರ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆಯಿಂದ ಏರ್ಪಡಿಸಿದ್ದ 2025-26 ನೇ ಸಾಲಿನ ವಿಜಯನಗರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಸೋಮವಾರ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಕೇವಲ ಪಠ್ಯಪುಸ್ತಕದ ಶಿಕ್ಷಣ ನೀಡುವುದರ ಜತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಇಂತಹ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ಆಯೋಜಿಸುವುದು ಅಗತ್ಯವಾಗಿದೆ. ಇದರಿಂದ ಮಕ್ಕಳಲ್ಲಿ ಅನೇಕ ಪ್ರತಿಭಾವಂತರು ಒಂದೊAದು ಕ್ಷೇತ್ರದಲ್ಲಿ ತಮ್ಮದೇ ಆದ ಕೌಶಲ್ಯವನ್ನು ಹೊಂದಿರುತ್ತಾರೆ.

ಇದನ್ನೂ ಓದಿ: ಮಹತ್ವಕಾಂಕ್ಷಿ ಕ್ರೀಡಾ ಯೋಜನೆಗಳು ಹಾಗೂ ಕ್ರೀಡೆಯ ಭವಿಷ್ಯ??

ಕೆಲವರು ಓದಿನಲ್ಲಿ ಮುಂದಿದ್ದರೇ, ಕೆಲವು ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸಾಧನೆ ಸಾಧಿಸುತ್ತಾರೆ. ಇನ್ನೂ ಕೆಲವರು ಗಾಯನ, ನಟನೆ, ಸಂಗೀತ ಸೇರಿದಂತೆ ವಿವಿಧ ಮನೋರಂಜನಾತ್ಮಕವಾದ ನೈಪುಣ್ಯಗಳನ್ನು ಹೊಂದಿರುತ್ತಾರೆ. ಅವರಲ್ಲಿನ ಪ್ರತಿಭೆಗಳನ್ನು ಅನಾವರಣಗೊಳಿಸಲು ಶಾಲಾ ಹಂತದಲ್ಲಿ ಭವಿಷ್ಯ ರೂಪಿಸಿದಂತಾಗಲಿದೆ.

 

ಪಾಲಕರು ಮತ್ತು ಶಿಕ್ಷಕರು ಮಕ್ಕಳಲ್ಲಿ ವಿಶೇಷ ಗುಣಗಳನ್ನು ಗ್ರಹಿಸಿ ಅವರನ್ನು ಪ್ರೋತ್ಸಾಹಿಸಬೇಕಿದೆ. ಮಕ್ಕಳಲ್ಲಿ ಅತ್ಮವಿಶ್ವಾಸ ಹೆಚ್ಚುವ ಮೂಲಕ ಇನ್ನಷ್ಟು ಆಸಕ್ತಿ ವಹಿಸಲಿದ್ದಾರೆ ಎಂದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಮಾತನಾಡಿ, ಬಾಲ್ಯದಲ್ಲಿ ಮಕ್ಕಳು ಅನೇಕ ಕಲಾತ್ಮಕ ವಿಷಯಗಳಲ್ಲಿ ಆಸಕ್ತಿ ಉಳ್ಳವರಾಗಿರುತ್ತಾರೆ. ಮಕ್ಕಳು ತಮ್ಮ ಸ್ವಂತ ಪ್ರತಿಭೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆಗಳನ್ನು ನೀಡುವುದು ಅಗತ್ಯವಿದೆ.

ಶಾಲಾ ಪರಿಸರದಿಂದಲೇ ಮಕ್ಕಳಿಗೆ ಕಲಾತ್ಮಕ ಚಟುವಟಿಕೆಗಳಿಗೆ ಉತ್ತೇಜನ ನೀಡಿದರೇ ಉತ್ತಮ ಕಲಾವಿದರಾಗಿ ಕಲಾ ಕ್ಷೇತ್ರಕ್ಕೆ ಕೊಡುಗೆ ನೀಡಲಿದ್ದಾರೆ ಎಂದರು. ಜಿಲ್ಲೆಯ ವಿವಿಧ ತಾಲೂಕಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ 178 ಸ್ಪರ್ಧಾಳುಗಳು ಜಿಲ್ಲಾ ಮಟ್ಟದ ವೇದಿಕೆಯಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಡಾ. ಪುನೀತ್ ರಾಜಕುಮಾರ್ ಅವರ ಆಸ್ತಿ ಏನು ಗೊತ್ತೇ? : ನಂದಿನಿ ಸನಬಾಳ್ 

ಕಾರ್ಯಕ್ರಮದಲ್ಲಿ ಹೊಸಪೇಟೆ ಕ್ಷೇತ್ರಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟೆ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಬಿ.ಶಿವಾನಂದ, ವೃತ್ತ ನಿರೀಕ್ಷಕ ಗುರುರಾಜ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಅಯ್ಯಪ್ಪ, ಮಾರ್ಕಂಡೇಶ್ವರ ಶಾಲೆಯ ಅಧ್ಯಕ್ಷರಾದ ಬಿ.ಜಯರಾಮ್, ನಿವೃತ್ತ ಎನ್‌ಸಿಸಿ ವಿಭಾಗಾಧಿಕಾರಿ ಗಿರೀಶ್,

ಜಿಲ್ಲಾ ಪ್ರೌಢಶಾಲಾ ಮುಖ್ಯಗುರುಗಳ ಸಂಘದ ಅಧ್ಯಕ್ಷೆ ಅಕ್ಕಮಹಾದೇವಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಪ್ಪ, ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಿಕ್ಷಣಾಧಿಕಾರಿ ಪರುಷಪ್ಪ ಭಜಂತ್ರಿ ಸ್ವಾಗತಿಸಿದರು. ಜಿಲ್ಲಾ ಪ್ರತಿಭಾ ಕಾರಂಜಿ ಹಾಗು ಕಲೋತ್ಸವ ಕಾರ್ಯಕ್ರಮದ ನೋಡಲ್ ಅಧಿಕಾರಿ ಹಾಗೂ ವಿಷಯ ಪರಿವೀಕ್ಷಕ ಕೆ.ಎಚ್.ಎಮ್.ವಿಶ್ವನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ: ಮಹಿಳೆಯರ ಸಂರಕ್ಷಣೆ ಕಾಯ್ದೆ ಹಾಗೂ ಪ್ರಗತಿ ಯೋಜನೆಗಳು ನಮಗೆಷ್ಟು ಗೊತ್ತು? : ಗವಿಸಿದ್ದಪ್ಪ ಹೊಸಮನಿ

ಪರಿವೀಕ್ಷಕ ವಿಷಯ ಪರಿವೀಕ್ಷಕ ಬಸಂತಯ್ಯ ಹಿರೇಮಠ ವಂದಿಸಿದರು. ಶಿಕ್ಷಕ ಜಿ.ಎಂ.ಪ್ರದೀಪ್ ಕುಮಾರ್ ಹಾಗೂ ನಾಗರಾಜ್ ನಿರ್ವಹಿಸಿದರು. ಹಾಗೂ  ಸ್ಪರ್ಧೆಯ ನಿರ್ಣಾಯಕರಾಗಿ ಜಿಲ್ಲೆಯ ವಿವಿಧ ತಾಲೂಕಿನ ಶಾಲೆಗಳ ಶಿಕ್ಷಕರು ಭಾಗವಹಿಸಿದ್ದರು.

Please follow and like us:

 

 

 

 

 

 

Translate »
[t4b-ticker]
error: Content is protected !!