https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹೊಸಪೇಟೆ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕೇಂದ್ರದಿಂದ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಆರ್‌ಎಸ್‌ಇಟಿಐ ನಿರ್ದೇಶಕ ಗಿರಿಧರ್ ತಿಳಿಸಿದ್ದಾರೆ.
ಇದನ್ನೂ ಓದಿ: ಜ್ಞಾನಸುಧಾ – ಅರ್ಹ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಲಾಂಗ್ ಟರ್ಮ್ ತರಬೇತಿ: ಡಾ.ಸುಧಾಕರ್ ಶೆಟ್ಟಿ
ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವಕ, ಯುವತಿಯರಿಗೆ ಮಹಿಳಾ ಹೊಲಿಗೆ ತರಬೇತಿ (31 ದಿನಗಳು), ಪಂಪ್‌ಸೆಟ್‌ನ ಮೋಟಾರ್ ರಿಪೇರಿ ತರಬೇತಿ (31 ದಿನಗಳು), ಹೈನುಗಾರಿಕೆ ತರಬೇತಿ (13 ದಿನಗಳು) ಮತ್ತು ಕೈವರ್ಕ್(ಮಗ್ಗಂ) ಕೈಕಸೂತಿ ತರಬೇತಿ (31 ದಿನಗಳು) ಗಳವರಗೆ ತರಬೇತಿ ನೀಡಲಾಗುತ್ತದೆ.

ಆಸಕ್ತ ಅರ್ಜಿದಾರರು ವಿಜಯನಗರ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ 18 ರಿಂದ 50 ವರ್ಷದೊಳಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು ಆಧಾರ ಕಾರ್ಡ್, ರೇಷನ್ ಕಾರ್ಡ್, ಅಂಕಪಟ್ಟಿ ಜೆರಾಕ್ಸ್ ಪ್ರತಿಯೊಂದಿಗೆ 3 ಪಾಸ್‌ಪೋರ್ಟ್ ಸೈಜ್ ಮಾರ್ಕ್ಸ್ ಕಾರ್ಡ್, ಜಾತಿ ಆದಾಯ ಪ್ರಮಾಣ ಪತ್ರ ಮತ್ತು ಪ್ಯಾನ್ ಕಾರ್ಡ್ ಗಳೊಂದಿಗೆ ನಿರ್ದೇಶಕರ ಕಚೇರಿ,
ಇದನ್ನೂ ಓದಿ: ಪಂಚಮಸಾಲಿ ಪೀಠದಿಂದ ಐಎಎಸ್, ಕೆಎಎಸ್, ಐಪಿಎಸ್‌ಗೆ ತರಬೇತಿ : ವಚನಾನಂದ ಮಹಾಸ್ವಾಮಿಗಳು
ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣ, ಪೈ ಹೋಟೆಲ್ ಎದರುಗಡೆ, ಬಸ್ ನಿಲ್ದಾಣ ಹತ್ತಿರ ಹೊಸಪೇಟೆ. ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬೇಕು. ಆಸಕ್ತ ಅರ್ಹರು ಡಿಸೆಂಬರ್.29 ರಂದು ಸಂದರ್ಶನಕ್ಕೆ ಭಾಗವಹಿಸಬೇಕು. ಡಿಸೆÀಂಬರ್.30 ರಿಂದ ತರಬೇತಿಗಳು ಪ್ರಾರಂಭವಾಗಲಿವೆ. ಹೆಚ್ಚಿನ ಮಾಹಿತಿಗಾಗಿ ಮೊ.9741987137, ಮತ್ತು 6360467102, 9663471468 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





More Stories
ಹೊಸಪೇಟೆಯಲ್ಲಿ ಫೆ. ೨೭ಕ್ಕೆ ‘ಸರ್ವಧರ್ಮ ಸಮನ್ವಯ’ ಮಹಾರಥೋತ್ಸವದ ವೈಭವ!
ಯುವ ಕವಿಗಳು ಜನಸಾಮಾನ್ಯರ ಬದುಕು-ಬವಣೆಗಳಿಗೆ ಧ್ವನಿಯಾಗಿ
ಮೂರು ದಿನ ಸಾಂಸ್ಕೃತಿಕ ಹಬ್ಬಕ್ಕೆ ಸಜ್ಜಾದ ವಿಜಯನಗರ ಸಾಮ್ರಾಜ್ಯ