https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹೊಸಪೇಟೆ
ಗ್ರಾಮೀಣ ಭಾಗದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ತಾಂತ್ರಿಕ ಕೌಶಲ್ಯಗಳನ್ನು ಒದಗಿಸಿ, ಅವರಲ್ಲಿ ನಾವೀನ್ಯತೆಯನ್ನು ಬೆಳೆಸುವ ಮೂಲಕ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ತಂತ್ರಜ್ಞಾನದ ಮೂಲಕ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳನ್ನು ಸಬಲೀಕರಕ್ಕೆ ಸಿಯಟ್ ವಿಜಯಪಥವನ್ನು ಆರಂಭಿಸಲಾಗಿದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಇದನ್ನೂ ಓದಿ: ಕಲಿಕೆ ನಿಂತ ನೀರಾಗಬಾರದು ಹರಿಯುವ ನದಿಯಾಗಬೇಕು: ಸಚಿವ ದರ್ಶನಾಪೂರ್ ಹೇಳಿಕೆ
ಸಿಯಂಟ್ ಫೌಂಡಶನ್ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜಯಪಥಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡಲು ಸಹಕಾರಿಯಾಗಿದೆ. ಶಿಕ್ಷಕರು ತಂತ್ರಜ್ಞಾನ ಬಳಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಸಿಯೆಂಟ್ ಲಿಮಿಟೆಡ್ನ ಸ್ಥಾಪಕ ಅಧ್ಯಕ್ಷ ಡಾ. ಬಿ.ವಿ.ಆರ್. ಮೋಹನ್ ರೆಡ್ಡಿ ಮಾತನಾಡಿ, ಹೊಸಪೇಟೆ ತಾಲ್ಲೂಕಿನ ಐದು ಸರ್ಕಾರಿ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ಬಂದಿದ್ದು, 6 ರಿಂದ 10 ನೇ ತರಗತಿಯ 2,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದೆ. ಯೋಜನೆಯಡಿ ಐದು ಸಂಪೂರ್ಣ ಸುಸಜ್ಜಿತ ಕೃತಕ ಬುದ್ಧಿಮತ್ತೆ-ಸ್ಟೆಮ್ (AI-STEM) ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ.
ಈ ಲ್ಯಾಬ್‌ಗಳಲ್ಲಿ ಕಂಪ್ಯೂಟರ್‌ಗಳು, ಐಒಟಿ ಸಾಧನಗಳು, ರೊಬೊಟಿಕ್ಸ್ ಕಿಟ್‌ಗಳು ಮತ್ತು ಹೈಸ್ಪೀಡ್ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ಕಲ್ಪಿಸಲಾಗಿದೆ. ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ದೀರ್ಘಕಾಲೀನ ಸುಸ್ಥಿರತೆಗಾಗಿ 200ಕ್ಕೂ ಹೆಚ್ಚು ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ.
“ತಂತ್ರಜ್ಞಾನ ಚಾಲಿತ ಶಿಕ್ಷಣವು ಸಮಾನ ಮತ್ತು ಭವಿಷ್ಯಕ್ಕೆ ಸಿದ್ಧವಾದ ಭಾರತಕ್ಕೆ ಅಡಿಪಾಯವಾಗಿದೆ. ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ನಾವು ವಿದ್ಯಾರ್ಥಿಗಳನ್ನು ತಂತ್ರಜ್ಞಾನದ ಕೇವಲ ಬಳಕೆದಾರರನ್ನಾಗಿ ಮಾಡದೆ, ಸೃಷ್ಟಿಕರ್ತರನ್ನಾಗಿ ರೂಪಿಸಲು ಸಜ್ಜಾಗಿದ್ದೇವೆ. ಇದು ವಿಕಸಿತ ಭಾರತ 2047ರ ದೃಷ್ಟಿಕೋನಕ್ಕೆ ಪೂರಕವಾಗಿದೆ,” ಎಂದು ತಿಳಿಸಿದರು.

ಈ ಯೋಜನೆಯು ಎನ್ಇಪಿ 2020 ಮತ್ತು ಡಿಜಿಟಲ್ ಇಂಡಿಯಾ ಅಭಿಯಾನದ ಆಶಯದಂತೆ ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವಿನ ಡಿಜಿಟಲ್ ಅಂತರವನ್ನು ಕಡಿಮೆ ಮಾಡುವ ಗುರಿ ಹೊಂದಿದೆ. ಪ್ರಾಜೆಕ್ಟ್ ಆಧಾರಿತ ಕಲಿಕೆಯ ಮೂಲಕ ವಿದ್ಯಾರ್ಥಿಗಳು ನೈಜ ಜಗತ್ತಿನ ಸಮಸ್ಯೆಗಳಿಗೆ ತಾಂತ್ರಿಕ ಪರಿಹಾರ ಕಂಡುಕೊಳ್ಳಲು ಈ ಉಪಕ್ರಮ ಸಹಕಾರಿಯಾಗಲಿದೆ ಎಂದರು.
ಶಾಸಕ ಎಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಜಿಪಂ ಸಿಇಒ ಎನ್.ಎಂ.ಅಕ್ರಲ್ ಅಲಿ ಷಾ, ಡಿಡಿಪಿಐ ವೆಂಕಟೇಶ ರಾಮಚಂದ್ರಪ್ಪ, ಶಿಕ್ಷಕರು ಇತರರು ಇದ್ದರು.





More Stories
ಫೆ.13 ರಿಂದ 3ದಿನ ‘ಹಂಪಿ ಉತ್ಸವ-2026ಕ್ಕೆ ಸಿಎಂ ಚಾಲನೆ : ಸಚಿವ ಜಮೀರ್ ಖಾನ್
ಫೆಬ್ರವರಿಯಲ್ಲಿ ಶ್ರೀ ವಾಲ್ಮೀಕಿ ಜಾತ್ರೋತ್ಸವ
ಯಾರೂ ನಿರ್ಲಕ್ಷ್ಯವಹಿಸಬಾರದು: ಡಿ.ವೈ.ಎಸ್.ಪಿ ಸಂತೋಷ್ ಚೌಹಾಣ್