https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಬಳ್ಳಾರಿ
ಜಿಲ್ಲೆಯಲ್ಲಿ ಬೆಳೆ ಕಟಾವು ಪ್ರಯೋಗಗಳು ಮತ್ತು ಜನನ, ಮರಣ ಘಟನೆ ವಿವರ ನೋಂದಣಿಯಲ್ಲಿ ವಿಳಂಬ ತೋರುವಂತಿಲ್ಲ, ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಜನನ ಮತ್ತು ಮರಣ ಘಟನೆ ವಿವರಗಳನ್ನು ನಿಗದಿತ ಅವಧಿಯೊಳಗೆ ತಪ್ಪದೇ ಮಾಹಿತಿ ನೋಂದಾಯಿಸಿಕೊಂಡು, ಸಂಬಂಧಿಸಿದ ಕುಟುಂಬದವರಿಗೆ ಪ್ರಮಾಣಪತ್ರ ವಿತರಣೆ ಮಾಡಬೇಕು. ಅವರನ್ನು ಕಚೇರಿಗಳಿಗೆ ಅಲೆದಾಡಿಸುವಂತಿಲ್ಲ.
ಇದನ್ನೂ ಓದಿ: ಜನನ, ಮರಣ ನೋಂದಣಿ ವಿಳಂಬ ಸಲ್ಲದು, ಅಧಿಕಾರಿಗಳಿಗೆ ಡಿಸಿ ಕವಿತಾ ಎಸ್ ಮನ್ನಿಕೇರಿ ಸೂಚನೆ
ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಒಟ್ಟು 125 ಜನನ, ಮರಣ ಘಟನೆ ವಿವರ ನೋಂದಣಿಯಲ್ಲಿ ವಿಳಂಬವಾಗಿದ್ದು, ಎಲ್ಲಾ ಘಟನೆಗಳನ್ನು ನಿಗಧಿತ ಸಮಯದಲ್ಲಿ ನೋಂದಣಿ ಮಾಡಲು ಸಂಬಂಧಿಸಿದ ವೈದ್ಯಾಧಿಕಾರಿಗಳಿಗೆ.
ಅದೇರೀತಿಯಾಗಿ ಸಂಡೂರು ತಾಲ್ಲೂಕಿನ ತೋರಣಗಲ್ಲು, ಬಂಡ್ರಿ, ಚೋರನೂರು, ತಾರನಗರ ಮತ್ತು ಸಿರುಗುಪ್ಪ ತಾಲ್ಲೂಕಿನ ಕರೂರು ಸರ್ಕಾರಿ ಆಸ್ಪತೆಗಳಲ್ಲಿ ಜನನ ಮತ್ತು ಮರಣ ಘಟನೆಗಳ ವಿವರ ನೋಂದಣಿಯಲ್ಲಿ ವಿಳಂಬವಾಗಿರುವುದು ಕಂಡುಬಂದಿದ್ದು, ಕಾರಣ ಕೇಳಿ ಸಂಬಂಧಿಸಿದ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕರನ್ನು ಜನನ ಮತ್ತು ಮರಣ ಪ್ರಮಾಣಪತ್ರಕ್ಕಾಗಿ ಅಲೆದಾಡಿಸಬಾರದು. ಸರ್ಕಾರದ ಮಾರ್ಗಸೂಚಿಯಂತೆ 21 ದಿನ ಗಳ ಬದಲಾಗಿ 21 ಗಂಟೆಗಳಲ್ಲಿ ಜಿಲ್ಲೆಯಲ್ಲಿ ಪ್ರಮಾಣ ಪತ್ರಗಳನ್ನು ಕುಟುಂಬಸ್ಥರಿಗೆ ನೀಡುವಲ್ಲಿ ಯಶ್ವಸಿಯಾಗಬೇಕು.
ಅದೇರೀತಿಯಾಗಿ ಮರಣ ಘಟನೆ ಸಂಭವಿಸಿದಲ್ಲಿ ಮೂರು ದಿನದೊಳಗೆ ನಗರ ಸ್ಥಳೀಯ-ಸಂಸ್ಥೆಗಳ ಸಿಬ್ಬಂದಿ ಮನೆ ಭೇಟಿ ನಡೆಸಿ ಪೂರಕ ದಾಖಲೆ ಪಡೆದು ಪ್ರಮಾಣಪತ್ರ ವಿತರಿಸಬೇಕು. ಪ್ರತಿ ತಿಂಗಳಿಗೊಮ್ಮೆ ಆಯಾ ತಾಲ್ಲೂಕುಗಳ ತಹಶೀಲ್ದಾರರು ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಣೆಗೆ ಆಗುವ ವಿಳಂಬ ಕುರಿತು ಸಭೆ ನಡೆಸಬೇಕು.
ಬೆಳೆ ಕಟಾವು ಪ್ರಯೋಗದ ವರದಿ ಮಾಡುವಾಗ ಅಧಿಕಾರಿಗಳು ತಂತ್ರಾಂಶದಲ್ಲಿ ಅಂಕಿ ಅಂಶಗಳು ತಪ್ಪಾಗದಂತೆ ಪ್ರಯೋಗದ ವಿವರಗಳನ್ನು ಭರ್ತಿ ಮಾಡಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಸಣ್ಣ ನೀರಾವರಿ ಹಾಗೂ ನೀರಿನಾಸರೆಗಳ ಗಣತಿಯನ್ನು ಸಮರ್ಪಕವಾಗಿ ಕೈಗೊಳ್ಳಬೇಕು.
ಜಿಲ್ಲಾ ಮಟ್ಟದಲ್ಲಿ ಗಣತಿ ಕಾರ್ಯ ಮಾಡುವ ಮೇಲ್ವಿಚಾರಕರಿಗೆ ಮತ್ತು ತಾಲ್ಲೂಕು ಮಟ್ಟದಲ್ಲಿ ಗಣತಿ ಕಾರ್ಯ ಕೈಗೊಳ್ಳುವ ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಗಣತಿ ಕಾರ್ಯ ವಿಧಾನದ ಕುರಿತು ಸೂಕ್ತ ತರಬೇತಿ ಹೊಂದಬೇಕು ಎಂದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಎನ್.ಕೆ.ಪತ್ರಿಬಸಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಸೋಮಸುಂದರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಇತರರಿದ್ದರು.





More Stories
ಫೆ.13 ರಿಂದ 3ದಿನ ‘ಹಂಪಿ ಉತ್ಸವ-2026ಕ್ಕೆ ಸಿಎಂ ಚಾಲನೆ : ಸಚಿವ ಜಮೀರ್ ಖಾನ್
ಫೆಬ್ರವರಿಯಲ್ಲಿ ಶ್ರೀ ವಾಲ್ಮೀಕಿ ಜಾತ್ರೋತ್ಸವ
ಯಾರೂ ನಿರ್ಲಕ್ಷ್ಯವಹಿಸಬಾರದು: ಡಿ.ವೈ.ಎಸ್.ಪಿ ಸಂತೋಷ್ ಚೌಹಾಣ್