https://youtu.be/NHc6OMSu0K4?si=SI_K4goOPEgwo6h2

ಪೋಕ್ಸೊ ಅಡಿ ಜೈಲು ವಾಸ | ನ್ಯಾಯಾಲಯದ ಮಹತ್ವದ ತೀರ್ಪು| ಒಂದೂವರೆ ಲಕ್ಷ ದಂಡ
ಕೊಪ್ಪಳ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಗಂಗಾವತಿಯ ಎಚ್.ಆರ್.ಎಸ್ ಕಾಲೋನಿ ನಿವಾಸಿ ಹುಲ್ಲೇಶ ಕೊಜ್ಜ ಎಂಬ ಅಪರಾಧಿಗೆ ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 1.5 ಲಕ್ಷ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ವಿವರ: 2022ರ ಸೆಪ್ಟೆಂಬರ್ 7 ರಂದು ಬಾಲಕಿಯು ಶಾಲೆಗೆ ಹೋಗುತ್ತಿದ್ದಾಗ ಹೊಸಳ್ಳಿ ಕ್ರಾಸ್ ಹತ್ತಿರ ಆರೋಪಿಯು ಮೋಟಾರ್ ಸೈಕಲ್‌ನಲ್ಲಿ ಬಂದು, ಶಾಲೆಗೆ ಬಿಡುವುದಾಗಿ ನಂಬಿಸಿ ಅಪಹರಿಸಿದ್ದನು. ನಂತರ ಮಲ್ಲಾಪುರ ಸೀಮಾದ ವಾನಭದ್ರೇಶ್ವರ ಗುಡ್ಡಕ್ಕೆ ಕರೆದೊಯ್ದು ಎರಡು ದಿನಗಳ ಕಾಲ ಅತ್ಯಾಚಾರ ಎಸಗಿ, ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು.
ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ ಎಸ್. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಿಸೆಂಬರ್ 19ರಂದು ಶಿಕ್ಷೆ ಪ್ರಕಟಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು. ಪೊಲೀಸ್ ಸಿಬ್ಬಂದಿಗಳಾದ ವಿಶ್ವನಾಥ ಹಾಗೂ ಮಂಜುನಾಥ ಅವರು ಸಾಕ್ಷ್ಯಧಾರರನ್ನು ಹಾಜರುಪಡಿಸುವಲ್ಲಿ ಸಹಕರಿಸಿದ್ದರು ಎಂದು ನ್ಯಾಯಾಲಯದ ಪ್ರಕಟಣೆ ತಿಳಿಸಿದೆ.





More Stories
ಫೆ.13 ರಿಂದ 3ದಿನ ‘ಹಂಪಿ ಉತ್ಸವ-2026ಕ್ಕೆ ಸಿಎಂ ಚಾಲನೆ : ಸಚಿವ ಜಮೀರ್ ಖಾನ್
ಫೆಬ್ರವರಿಯಲ್ಲಿ ಶ್ರೀ ವಾಲ್ಮೀಕಿ ಜಾತ್ರೋತ್ಸವ
ಯಾರೂ ನಿರ್ಲಕ್ಷ್ಯವಹಿಸಬಾರದು: ಡಿ.ವೈ.ಎಸ್.ಪಿ ಸಂತೋಷ್ ಚೌಹಾಣ್