January 15, 2026

Hampi times

Kannada News Portal from Vijayanagara

ಫೆ.13 ರಿಂದ 3ದಿನ ‘ಹಂಪಿ ಉತ್ಸವ-2026ಕ್ಕೆ ಸಿಎಂ ಚಾಲನೆ : ಸಚಿವ ಜಮೀರ್ ಖಾನ್

https://youtu.be/NHc6OMSu0K4?si=SI_K4goOPEgwo6h2

 

ಹಂಪಿ ಟೈಮ್ಸ್ ಹೊಸಪೇಟೆ
ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನಗಳ ಕಾಲ ಅತ್ಯಂತ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ. ವಕ್ಫ್  ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ತಿಳಿಸಿದರು.‌
​ಅವರು ಬುಧವಾರ ಹೊಸಪೇಟೆ ಅಮರಾವತಿ ಪ್ರವಾಸಿ ಮಂದಿರದಲ್ಲಿ ಹಂಪಿ ಉತ್ಸವ-2026 ರ ಲಾಂಛನ ಬಿಡುಗಡೆ ಮಾಡಿ ಮಾತನಾಡಿ ಹಂಪಿ ಉತ್ಸವದ ಸಿದ್ಧತೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು.
​ಉದ್ಘಾಟನೆ: ಫೆಬ್ರವರಿ 13ರ ಸಂಜೆ ಮಾನ್ಯ ಮುಖ್ಯಮಂತ್ರಿಗಳು ಹಂಪಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
​ದಿನಾಂಕದ ಹಿನ್ನೆಲೆ: ಈ ಹಿಂದೆ ಎಂ.ಪಿ. ಪ್ರಕಾಶ್ ಅವರ ಕಾಲದಲ್ಲಿ ನವೆಂಬರ್‌ನಲ್ಲಿ ಉತ್ಸವ ನಡೆಯುತ್ತಿತ್ತು. ಆದರೆ ಕೋವಿಡ್ ಕಾರಣದಿಂದ ವಿಳಂಬವಾಗಿ ಕಳೆದ ವರ್ಷಗಳಿಂದ ಫೆಬ್ರವರಿಯಲ್ಲಿ ನಡೆಸಲಾಗುತ್ತಿದೆ. ಈ ಬಾರಿಯೂ ಫೆಬ್ರವರಿ 13ರಿಂದಲೇ ಆರಂಭಿಸಲು ತೀರ್ಮಾನಿಸಲಾಗಿದೆ.
​ಬಜೆಟ್ ಪ್ರಸ್ತಾವನೆ: ಉತ್ಸವದ ಯಶಸ್ವಿ ಆಚರಣೆಗಾಗಿ ಈ ಬಾರಿ ₹22 ಕೋಟಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಳೆದ ವರ್ಷ 16 ಕೋಟಿ ಅನುದಾನ ನೀಡಲಾಗಿತ್ತು.
​ಕಲಾವಿದರ ಆಯ್ಕೆ: ರಾಷ್ಟ್ರ ಮತ್ತು ರಾಜ್ಯ ಮಟ್ಟದ ಖ್ಯಾತ ಕಲಾವಿದರನ್ನು ಆಹ್ವಾನಿಸುವ ಕುರಿತು ನಾಳೆ ಗುರುವಾರ ಬೆಳಿಗ್ಗೆ 11 ಗಂಟೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ಕಾರ್ಯಕ್ರಮಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.
ಹಂಪಿ ಉತ್ಸವದಲ್ಲಿ ಪ್ರತಿ ವರ್ಷದಂತೆ ಈ ಉತ್ಸವದಲ್ಲಿ ಯು ​ಸ್ಥಳೀಯ ಕಲಾವಿದರಿಗೂ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಾರಿಗೆ ಹಾಗೂ ಮೂಲಸೌಕರ್ಯಗಳ ಬಗ್ಗೆ ವಿಶೇಷ ಗಮನ ಹರಿಸಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು. ​ಜಿಲ್ಲಾ ಉಸ್ತುವಾರಿ ಸಚಿವನಾಗಿ ಎರಡು ಉತ್ಸವಗಳನ್ನು ಯಶಸ್ವಿ ಮಾಡಲಾಗಿದ್ದು ಇದು ಮೂರನೇ ಉತ್ಸವವಾಗಿದ್ದು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ ಎಂದರು.
ಈ ವೇಳೆ ಸಂಸದರಾದ ಈ.ತುಕಾರಾಂ, ಶಾಸಕರಾದ ಲತಾ  ಮಲ್ಲಿಕಾರ್ಜುನ್, ಕಂಪ್ಲಿ ಗಣೇಶ್, ನಾ.ರಾ.ಭರತ್ ರೆಡ್ಡಿ, ಹುಡಾ ಅಧ್ಯಕ್ಷರಾದ ಹೆಚ್.ಎನ್.ಎಫ್ ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಸಿಇಓ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಪೊಲೀಸ್ ಅಧೀಕ್ಷಕಿ ಎಸ್.ಜಹ್ನಾವಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Please follow and like us:

 

 

 

 

 

 

Translate »
[t4b-ticker]
error: Content is protected !!