https://youtu.be/NHc6OMSu0K4?si=SI_K4goOPEgwo6h2

ಹೊಸಪೇಟೆ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ವಿಜಯನಗರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದೆ.
ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದ್ದು, ಇದರಿಂದಾಗಿ ದುಬೈ ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಅನೇಕ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.
ಜಿಲ್ಲಾಡಳಿತದ ಕ್ರಮಗಳು:
ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ಮಟ್ಟದ ತುರ್ತು ಕಾರ್ಯಾಚರಣೆ ಕೇಂದ್ರಗಳು 24×7 ಕಾರ್ಯನಿರ್ವಹಿಸುತ್ತಿವೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.

ಸಹಾಯವಾಣಿ ಸಂಖ್ಯೆಗಳು:
ವಿಜಯನಗರ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು.
ವಿಜಯನಗರ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ: 08394-295655,
ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ: 9480805700,
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ: 080-22340676, 080-22253707
ಟೋಲ್ ಫ್ರೀ ಸಂಖ್ಯೆ: 1070
ಈ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದಾಗಿದೆ.
ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ ‘ಸಾರಥಿ ಸಹಾಯತಾ’ (Sarthi Sahayata) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ವೀಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ (FRRO) ಕಚೇರಿಯನ್ನು ಸಂಪರ್ಕಿಸಬೇಕೆಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ತಿಳಿಸಿದ್ದಾರೆ.



More Stories
ಮಾ. 6ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್ವ್ಯೂವ್
ಹೊಸಪೇಟೆಯಲ್ಲಿ ಫೆ. ೨೭ಕ್ಕೆ ‘ಸರ್ವಧರ್ಮ ಸಮನ್ವಯ’ ಮಹಾರಥೋತ್ಸವದ ವೈಭವ!
ಸಾಹಿತ್ಯ, ವೈಚಾರಿಕತೆ ಹಾಗೂ ಆಡಳಿತದ ತ್ರಿವೇಣಿ ಸಂಗಮಕ್ಕೆ ‘ನಾಡೋಜ’ ಗೌರವ