
ಡಾ. ಎಂ. ವಿನಯ್‌ಗೆ ಹೊಣೆ | ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಬದಲಾವಣೆ
ಆಯುಕ್ತರ ಕಚೇರಿಗೆ ಡಾ.ಶಂಕರನಾಯ್ಕ ಸ್ಥಳಾಂತರ
ಹಂಪಿ ಟೈಮ್ಸ್ ಹೊಸಪೇಟೆ
ವಿಜಯನಗರ ಜಿಲ್ಲೆಯ ಸಾರ್ವಜನಿಕ ಆರೋಗ್ಯ ರಕ್ಷಣೆಯಲ್ಲಿ ಸ್ಥಿರತೆ ಕಾಪಾಡುವ ನಿಟ್ಟಿನಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿದ್ದ (ಡಿಎಚ್‌ಒ) ಡಾ. ಶಂಕರ್ ನಾಯ್ಕ್ ಎಲ್.ಆರ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಪ್ರಭಾರ ಡಿಎಚ್‌ಒ ಆಗಿ ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಎಂ. ವಿನಯ್ ಅವರನ್ನು ನೇಮಕ ಮಾಡಿ ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಏ.8 ರಂದು ಅಧಿಕೃತ ಆದೇಶ ಹೊರಡಿಸಿದ್ದಾರೆ.
ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಶಂಕರ್ ನಾಯ್ಕ್ ಎಲ್.ಆರ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ಇವರು ಮುಂದಿನ ಸ್ಥಳ ನಿಯುಕ್ತಿಗಾಗಿ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಆಯುಕ್ತರ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.


ತೆರವಾದ ಡಿಎಚ್‌ಒ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಿಜಯನಗರ ಜಿಲ್ಲೆಯ ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ. ಎಂ. ವಿನಯ್ ಅವರಿಗೆ ವಹಿಸಿಕೊಡಲಾಗಿದೆ. ಸರ್ಕಾರದ ಆದೇಶದನ್ವಯ ಡಾ. ಎಂ. ವಿನಯ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಡಿಎಚ್‌ಒ ಹುದ್ದೆಯ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ. ಜಿಲ್ಲೆಯ ಆರೋಗ್ಯ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಸಂಘಟಿತವಾಗಿ ಕೆಲಸ ಮಾಡಲು ಆಯುಕ್ತರು ಸೂಚಿಸಿದ್ದು, ಶಂಕರ್ ನಾಯ್ಕ್ ಅವರು ಕೂಡಲೇ ಅಧಿಕಾರ ಹಸ್ತಾಂತರಿಸಿ ಬೆಂಗಳೂರಿನಲ್ಲಿ ವರದಿ ಮಾಡಿಕೊಳ್ಳಲು ನಿರ್ದೇಶನ ನೀಡಲಾಗಿದೆ.



More Stories
ರಾಜ್ಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಹೊಸಪೇಟೆಯ ಪಿ.ಎಂ. ಶ್ರೀವರ್ಧನ್ ರೆಡ್ಡಿಗೆ ಪ್ರಥಮ ಸ್ಥಾನ
ಕ್ರೀಡೆಗಳು ಬಂದಿಗಳಲ್ಲಿ ಮಾನಸಿಕ ಉಲ್ಲಾಸ, ಸಕಾರಾತ್ಮಕ ಬದಲಾವಣೆ ತರಲು ಸಹಕಾರಿ: ಮಧುಸೂದನ್
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹೊಸಪೇಟೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ