https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಸಂಡೂರು:
ಪಟ್ಟಣದ ಶ್ರೀಶೈಲೇಶ್ವರ ವಿದ್ಯಾಕೇಂದ್ರದ ಎಸ್ ವಿ ನಾನಾವಟೆ ಪಿಯು ಕಾಲೇಜಿನ ಆವರಣದಲ್ಲಿ ಶುಕ್ರವಾರ ಸಾಧಕ ವಿದ್ಯಾರ್ಥಿಗಳನ್ನು ಕಾಲೇಜುವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.

ಎಪ್ರಿಲ್ 2026ರ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 593 ಅಂಕಗಳನ್ನು ಪಡೆದು ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 2ನೇ ರ‍್ಯಾಂಕ್ ಗಳಿಸಿದ ಹೆಚ್ ಸುದೀಪ ಹಾಗೂ ವಾಣಿಜ್ಯ ವಿಭಾಗದಲ್ಲಿ 596 ಅಂಕಗಳನ್ನು ಪಡೆದು ರಾಜ್ಯಕ್ಕೆ 5ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 1ನೇ ರ‍್ಯಾಂಕ್ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿನ ಕೀರ್ತಿಯನ್ನು ರಾಜ್ಯಮಟ್ಟಕ್ಕೆ ಕೊಂಡೊಯ್ದ ಸಂಜನಾ ಎನ್ ಅವರನ್ನು ಕಾಲೇಜಿನ ವತಿಯಿಂದ ಅತ್ಯಂತ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀಶೈಲೇಶ್ವರ ವಿದ್ಯಾಕೇಂದ್ರದ ಕಾರ್ಯದರ್ಶಿ ಚಿದಂಬರ ಎಸ್ ನಾನಾವಟೆ, ಆಡಳಿತಾಧಿಕಾರಿ ಕುಮಾರ್ ಎಸ್ ನಾನಾವಟೆ, ಪ್ರಾಂಶುಪಾಲ ಜಯಪ್ರಕಾಶ ಎಸ್ ಎನ್, ಉಪಪ್ರಾಂಶುಪಾಲ ಆನಂದರಾವ್ ಸಾಳುಂಕೆ, ಅಕಾಡೆಮಿಕ್ ಡೀನ್ ನಾಗೇಂದ್ರ ಪ್ರಸಾದ್, ಕೋ-ಆರ್ಡಿನೇಟರ್ ಅರುಣ್ ಕುಮಾರ್ ಸಿ ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.



More Stories
ಎಂ.ಪಿ. ಪ್ರಕಾಶ ಅಧಿಕಾರಕ್ಕಿಂತ ಮೌಲ್ಯಗಳಿಗೆ ಬೆಲೆ ನೀಡಿದ ಮಹಾನ್ ನಾಯಕ: ಮಾಜಿ ಸಿಎಂ ಸಿದ್ದರಾಮಯ್ಯ
ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ
ಜಿಲ್ಲಾವಾರು ಉಸ್ತುವಾರಿ ಸಚಿವರ ನೇಮಕ, ಯಾರು ಯಾವ ಜಿಲ್ಲೆಗೆ ಗೊತ್ತಾ?