
ಹಂಪಿ ಟೈಮ್ಸ್ ಹೊಸಪೇಟೆ:
ಇಲ್ಲಿನ ವಿನಾಯಕ ಎಜುಕೇಷನ್ ಸೊಸೈಟಿಯ ನ್ಯಾಷನಲ್ ಪಿಯು ಕಾಂಪೋಸಿಟ್ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ. ಕಾಲೇಜಿನ ವಿಜ್ಞಾನ ವಿಭಾಗದ ಮಾನಸ ಬಿ. 600ಕ್ಕೆ 591 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 8ನೇ ರ್ಯಾಂಕ್ ಮತ್ತು ವಿಜಯನಗರ ಜಿಲ್ಲೆಗೆ ದ್ವಿತೀಯ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಕಾಲೇಜು ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ತನ್ನ ವಿಶಿಷ್ಟ ಛಾಪು ಮೂಡಿಸಿದೆ.
ವಾಣಿಜ್ಯದಲ್ಲಿ ಶೇ. 91 ರಷ್ಟು ಫಲಿತಾಂಶ | ಹೊಸಪೇಟೆ ನಗರಕ್ಕೆ ಕಾಲೇಜು ಟಾಪರ್

ವಿಜ್ಞಾನ ವಿಭಾಗದಲ್ಲಿ ಶೇ. 97 ರಷ್ಟು ಫಲಿತಾಂಶ ದಾಖಲಾಗಿದ್ದು, 68 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ (ಡಿಸ್ಟಿಂಕ್ಷನ್) ಹಾಗೂ 103 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ. 91 ರಷ್ಟು ಫಲಿತಾಂಶ ಬಂದಿದ್ದು, 34 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 36 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಕಾಲೇಜಿನ ಒಟ್ಟಾರೆ ಫಲಿತಾಂಶ ಶೇ. 95 ರಷ್ಟಿದೆ. ಈ ಭವ್ಯ ಯಶಸ್ಸಿನ ಹಿನ್ನೆಲೆಯಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು.
ವಿಜಯನಗರ ಜಿಲ್ಲೆಗೆ ದ್ವಿತೀಯ ಸ್ಥಾನ | ವಿಜ್ಞಾನದಲ್ಲಿ ಶೇ. 97 ರಷ್ಟು ಯಶಸ್ಸು
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಶಶಿಧರ ಆರ್., ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಪಾಲಕರ ಪ್ರೋತ್ಸಾಹದಾಯಕ ಸಹಕಾರ ಹಾಗೂ ನಮ್ಮ ಉಪನ್ಯಾಸಕ ವೃಂದದ ಅವಿರತ ಶ್ರಮ ಇಂದು ಸಾರ್ಥಕವಾಗಿದೆ. ನಮ್ಮ ಕಾಲೇಜು ಹೊಸಪೇಟೆ ನಗರದಲ್ಲೂ ಟಾಪರ್ ಆಗಿ ಹೊರಹೊಮ್ಮಿರುವುದು ಹೆಮ್ಮೆಯ ವಿಷಯ ಎಂದು ಹರ್ಷ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದೆ.



More Stories
ರಾಜ್ಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಹೊಸಪೇಟೆಯ ಪಿ.ಎಂ. ಶ್ರೀವರ್ಧನ್ ರೆಡ್ಡಿಗೆ ಪ್ರಥಮ ಸ್ಥಾನ
ಕ್ರೀಡೆಗಳು ಬಂದಿಗಳಲ್ಲಿ ಮಾನಸಿಕ ಉಲ್ಲಾಸ, ಸಕಾರಾತ್ಮಕ ಬದಲಾವಣೆ ತರಲು ಸಹಕಾರಿ: ಮಧುಸೂದನ್
ಮೈಸೂರು ಚಾಮುಂಡೇಶ್ವರಿ ಕ್ಷೇತ್ರವು ಶಕ್ತಿಯ ಕೇಂದ್ರ: ಕೊಪ್ಪಳ ಗವಿಶ್ರೀಗಳು