https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹರಪನಹಳ್ಳಿ
ತಾಲ್ಲೂಕಿನಲ್ಲಿ ೨೦೨೬-೨೭ನೇ ಸಾಲಿನ ಆರ್ಥಿಕ ವರ್ಷದ ಆರಂಭದಲ್ಲೇ ಉದ್ಯೋಗ ಖಾತ್ರಿ ಯೋಜನೆಗೆ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ಈಗಾಗಲೇ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೫ ಸಾವಿರಕ್ಕೂ ಅಧಿಕ ಕೂಲಿಕಾರರಿಗೆ ಯಶಸ್ವಿಯಾಗಿ ಉದ್ಯೋಗ ಒದಗಿಸಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ವೈ.ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಮೊದಲ ಉದ್ಯೋಗ ಮೇಳದಲ್ಲಿ 417 ಅಭ್ಯರ್ಥಿಗಳು ಆಯ್ಕೆ, 9 ಲಕ್ಷ ರೂ.ವರೆಗೆ ಪ್ಯಾಕೇಜ್ : ಮೆಟ್ರಿ ಮಲ್ಲಿಕಾರ್ಜುನ

ಬೇಸಿಗೆಯ ಈ ಸಂದರ್ಭದಲ್ಲಿ ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಕೆರೆ ಹೂಳೆತ್ತುವುದು, ಬದು ನಿರ್ಮಾಣ, ರಸ್ತೆ ಅಭಿವೃದ್ಧಿ ಹಾಗೂ ಸಮುದಾಯ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. “ದುಡಿಯೋಣ ಬಾ” ಅಭಿಯಾನ ಮತ್ತು “ಸ್ತ್ರೀಚೇತನ” ಅಡಿಯಲ್ಲಿ ಉದ್ಯೋಗ ಸೃಜನೆಗೆ ಆದ್ಯತೆ ನೀಡಲಾಗಿದೆ. ಕೂಲಿಕಾರರು ಕೆಲಸಕ್ಕಾಗಿ ಗ್ರಾಮ ಪಂಚಾಯಿತಿಗೆ ನಮೂನೆ-೬ ಅರ್ಜಿ ಸಲ್ಲಿಸುವುದು ಕಡ್ಡಾಯ ವಾಗಿದ್ದು, ಅರ್ಜಿ ಸಲ್ಲಿಸಿದ ೧೫ ದಿನಗಳೊಳಗೆ ಕೆಲಸ ನೀಡದಿದ್ದಲ್ಲಿ ನಿರುದ್ಯೋಗ ಭತ್ಯೆ ಪಡೆಯಲು ಅವಕಾಶವಿದೆ.
ಕೂಲಿಕಾರರು ತಮ್ಮ ತಮ್ಮ ಬ್ಯಾಚ್‌ಗಳ (ಗುಂಪು) ಮೂಲಕ ಸಂಘಟಿತರಾಗಿ ಅರ್ಜಿ ಸಲ್ಲಿಸಿದರೆ ಕೆಲಸ ಹಂಚಿಕೆ ಮಾಡಲು ಸುಲಭವಾಗುತ್ತದೆ. ಅರ್ಜಿ ಸಲ್ಲಿಸಿದ ನಂತರ ಗ್ರಾಮ ಪಂಚಾಯಿತಿಯಿಂದ ಅಧಿಕೃತವಾಗಿ ಪಡೆದುಕೊಂಡೇ ಕೆಲಸವನ್ನು ಪ್ರಾರಂಭಿಸಬೇಕು
ಯೋಜನೆಯಲ್ಲಿ ಪಾರದರ್ಶಕತೆ ಕಾಪಾಡಲು ಎನ್‌ಎಂಎಂಎಸ್ ಮೂಲಕ ಹಾಜರಾತಿ ದಾಖಲಿಸಲಾಗುತ್ತಿದೆ ಎಂದು ತಿಲೀಸಿದರಿ.
ಜಿಲ್ಲಾ ಐಇಸಿ ಸಂಯೋಜಕ ಫಾಜಿಲ್ ಅಹಮ್ಮದ್ ಸೋಮವಾರ ದುಗ್ಗಾವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತೆಲಿಗಿ ಮತ್ತು ಬಾಗಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಬಿಎಫ್‌ಟಿಗಳು ಹಾಜರಾತಿ ಮತ್ತು ಕಾಮಗಾರಿ ಪ್ರಗತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಕೆಲಸದ ಸ್ಥಳದಲ್ಲಿ ಕುಡಿಯುವ ನೀರು, ನೆರಳು ಮತ್ತು ಪ್ರಥಮ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಯಾವುದೇ ತೊಂದರೆಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ ೮೨೭೭೫೦೬೦೦೦ಕ್ಕೆ ಕರೆ ಮಾಡಲು ತಿಳಿಸಿದ್ದಾರೆ.



More Stories
ಎಲ್ಲರಿಗೂ ಅಂಬೇಡ್ಕರ್ ಬದುಕು ಸ್ಫೂರ್ತಿದಾಯಕ
ಇಸ್ರೋ ಗಗನ್ಯಾನ್ ಪರೀಕ್ಷೆ ಯಶಸ್ವಿ
ಜೈವಿಕ ರಸಾಯನಶಾಸ್ತ್ರ ಮತ್ತು ಹೆಮಟಾಲಜಿಯಲ್ಲಿ ‘ಐಎಸ್ಒ 15189:2022’ ಮಾನ್ಯತೆ ಸಾಧನೆ.