https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಬಳ್ಳಾರಿ
ಕಾರ್ಮಿಕರ ದಿನಾಚರಣೆ ಹಾಗೂ ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಬಳ್ಳಾರಿಯ ಲಿಡ್‍ಕರ್ ಲೆದರ್ ಎಂಪೋರಿಯಂನಲ್ಲಿ ಗ್ರಾಹಕರಿಗಾಗಿ ಎಲ್ಲಾ ಚರ್ಮದ ಉತ್ಪನ್ನಗಳ ಮೇಲೆ ಶೇ. 15 ರಷ್ಟು ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ಹಮ್ಮಿಕೊಳ್ಳಲಾಗಿದೆ.

ನಗರದ ಬುಡಾ ಕಾಂಪ್ಲೆಕ್ಸ್‌ನಲ್ಲಿರುವ ಲಿಡ್‌ಕರ್ ಮಳಿಗೆಯಲ್ಲಿ ಏ.30 ರಿಂದ ಮೇ 31 ರವರೆಗೆ ಈ ವಿಶೇಷ ರಿಯಾಯಿತಿ ದರಗಳು ಅನ್ವಯವಾಗಲಿವೆ. ಮಳಿಗೆಯಲ್ಲಿ ಲಭ್ಯವಿರುವ ಗುಣಮಟ್ಟದ ಚರ್ಮದ ಪಾದರಕ್ಷೆಗಳು, ಬ್ಯಾಗ್‌ಗಳು, ಬೆಲ್ಟ್‌ಗಳು ಹಾಗೂ ಇನ್ನಿತರ ಎಲ್ಲಾ ಚರ್ಮದ ವಸ್ತುಗಳ ಖರೀದಿ ಮೇಲೆ ಗ್ರಾಹಕರು ಶೇ.15 ರಷ್ಟು ರಿಯಾಯಿತಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಹೆಚ್.ಆರ್. ಗವಿಯಪ್ಪ ವೃತ್ತದ ಬಳಿಯ ಬುಡಾ ಕಾಂಪ್ಲೆಕ್ಸ್ ನ ಶಾಪ್ ನಂ: 24ರ ಲಿಡ್‍ಕರ್ ಲೆದರ್ ಎಂಪೋರಿಯಮ್ ಮಳಿಗೆ ಅಥವಾ ದೂ.08392-271741, ಮೊ.98446 67691 ಅನ್ನು ಸಂಪರ್ಕಿಸಬಹುದಾಗಿದೆ. ಇದು ಸರ್ಕಾರಿ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ವಿಶೇಷ ಮಾರಾಟವಾಗಿದ್ದು, ಸಾರ್ವಜನಿಕರು ಹಾಗೂ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಲಿಡ್‌ಕರ್ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ಕೋರಿದ್ದಾರೆ.



More Stories
ಸೋಷಿಯಲ್ ಮೀಡಿಯಾ: ಕಣ್ಣಿಗೆ ಆಕರ್ಷಕ, ಮನಸ್ಸಿಗೆ ಮಾರಕ!
ಉದ್ಯಮಿ ಕೆ.ರವಿಶಂಕರ್ ಜನ್ಮದಿನದ ಸಾರ್ಥಕ ಸೇವೆ: ಆಸ್ಪತ್ರೆಯ ರೋಗಿಗಳಿಗೆ ಪೌಷ್ಟಿಕಾಹಾರ ವಿತರಣೆ
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್, ಕೋಟ್ಯಂತರ ರೂಪಾಯಿ ರಾಜಸ್ವ ಸಂಗ್ರಹ : ಅಬಕಾರಿ ನಿರೀಕ್ಷಕಿ ಎಸ್.ಬಿ.ಮಮತಾ