https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹೊಸಪೇಟೆ
ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಮೂಲಕ ಪರಿಸರ ಸಮತೋಲನವನ್ನು ಕಾಪಾಡುವುದು ಮತ್ತು ಸ್ವಚ್ಛ ಸಮಾಜ ನಿರ್ಮಾಣ ಮಾಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅನಿವಾರ್ಯವಾಗಿದೆ ಎಂಧು ಡಿಸಿ ಕವಿತಾ ಮನ್ನೀಕೇರಿ ಹೇಳಿದರು.

ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿಯ ವಿಸಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಜಯನಗರ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯವನ್ನು ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಅತ್ಯಂತ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಆದೇಶಿಸಿದ್ದಾರೆ.
ಪರಿಸರ ಸಮತೋಲನ ಕಾಪಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಅಥವಾ ಸುಡದೆ ವೈಜ್ಞಾನಿಕವಾಗಿ ಸಂಸ್ಕರಿಸಬೇಕು. ದಿನಕ್ಕೆ 100 ಕೆ.ಜಿಗಿಂತ ಹೆಚ್ಚು ತ್ಯಾಜ್ಯ ಉತ್ಪಾದಿಸುವ ಸಂಸ್ಥೆಗಳು ಅಥವಾ 20,000 ಚದರ ಮೀಟರ್‌ಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ವಾಣಿಜ್ಯ ಸಂಕೀರ್ಣಗಳು ತಮ್ಮ ಆವರಣದಲ್ಲೇ ಸಂಸ್ಕರಣಾ ಘಟಕ ಹೊಂದಿರಬೇಕು. ತಪ್ಪಿದಲ್ಲಿ ಅಂತಹವರ ಮೇಲೆ ದಂಡ ಪ್ರಯೋಗಿಸಲಾಗುವುದು ಎಂದು ಎಚ್ಚರಿಸಿದರು. ಸಾರ್ವಜನಿಕರು ಮನೆಯಲ್ಲೇ ಕಸ ವಿಂಗಡಿಸಿ ನೀಡುವ ಮೂಲಕ ಸಹಕರಿಸಬೇಕು ಮತ್ತು ಅಧಿಕಾರಿಗಳು ಜೂನ್ 30ರೊಳಗೆ ಕಡ್ಡಾಯವಾಗಿ ತ್ಯಾಜ್ಯ ನಿರ್ವಹಣೆಯ ವರದಿಯನ್ನು ಪೋರ್ಟಲ್‌ನಲ್ಲಿ ಸಲ್ಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮನೋಹರ್, ನಗರಸಭೆ ಪೌರಾಯುಕ್ತ ಶಿವಕುಮಾರ್, ಉಪವಿಭಾಗಾಧಿಕಾರಿ ವಿವೇಕ್, ಹಾಗೂ ತಹಶೀಲ್ದಾರ್ ಶೃತಿ ಎಂ. ಉಪಸ್ಥಿತರಿದ್ದರು.



More Stories
ಕನಕಗಿರಿ ಉತ್ಸವದ ಸಿದ್ಧತೆ ವೇಗಗೊಳಿಸಿ : ಜಿಲ್ಲಾಧಿಕಾರಿ ಡಾ.ಸುರೇಶ ಬಿ ಇಟ್ನಾಳ
ಉತ್ತಮ ಆಡಳಿತಗಾರ ಬಾಬುಜಿ
ಕಸಾಪ ಸಂಸ್ಥಾಪನಾ ದಿನಾಚರಣೆ ಸಂಭ್ರಮ