https://youtu.be/NHc6OMSu0K4?si=SI_K4goOPEgwo6h2

ಹಗರಿಬೊಮ್ಮನಹಳ್ಳಿಯಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ | 156 ಪ್ರಕರಣಗಳು ದಾಖಲು ಸಾಫಲ್ಯ

ಹಗರಿಬೊಮ್ಮನಹಳ್ಳಿ: ತಾಲೂಕಿನಲ್ಲಿ ನಕಲಿ ಮತ್ತು ಅಕ್ರಮ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ಬ್ರೇಕ್ ಹಾಕುವ ಮೂಲಕ ಅಬಕಾರಿ ಇಲಾಖೆಯು 2025-26ನೇ ಸಾಲಿನಲ್ಲಿ ಭಾರಿ ಪ್ರಮಾಣದ ರಾಜಸ್ವ ಸಂಗ್ರಹಣೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಹಗರಿಬೊಮ್ಮನಹಳ್ಳಿ ತಾಲೂಕಿನ ಅಬಕಾರಿ ನಿರೀಕ್ಷಕಿ ಎಸ್.ಬಿ.ಮಮತಾ ತಿಳಿಸಿದ್ದಾರೆ.
ತಾಲೂಕಿನಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಅಕ್ರಮ ಮದ್ಯದ ಜಾಲದ ವಿರುದ್ಧ ಇಲಾಖೆ ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದ ಅವರು, ತಾಲೂಕಿನಲ್ಲಿ ಈ ಸಾಲಿನಲ್ಲಿ ಒಟ್ಟು 156 ನಾನಾ ಪ್ರಕರಣಗಳನ್ನು ದಾಖಲಿಸುವ ಮೂಲಕ 1.58 ಕೋಟಿ ರೂಪಾಯಿ ರಾಜಸ್ವ ಸಂಗ್ರಹಣೆ ಮಾಡಲಾಗಿದೆ. ಕಾರ್ಯಾಚರಣೆಯ ವೇಳೆ ಒಟ್ಟು 156.120 ಲೀಟರ್ ಮದ್ಯ ಹಾಗೂ 35.750 ಲೀಟರ್ ಅಕ್ರಮ ಬಿಯರ್ ದಾಸ್ತಾನನ್ನು ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ. ಅಕ್ರಮ ಸಾಗಾಟದ ಸಂದರ್ಭದಲ್ಲಿ ಒಂದು ವಾಹನ ಸೇರಿದಂತೆ 139.380 ಲೀಟರ್ ಮದ್ಯ ಮತ್ತು 124.800 ಲೀಟರ್ ಬಿಯರ್ ಅನ್ನು ಜಪ್ತು ಮಾಡಲಾಗಿದೆ. ಅಬಕಾರಿ ಇಲಾಖೆಯು ಕೇವಲ ರಾಜಸ್ವ ಸಂಗ್ರಹಣೆಯಷ್ಟೇ ಅಲ್ಲದೆ, ನಕಲಿ ಮತ್ತು ಅಕ್ರಮ ಮದ್ಯ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಕಳೆದ ಸಾಲಿನಲ್ಲಿ 18832.9 ಮದ್ಯದ ಪೆಟ್ಟಿಗೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಸಾಲಿನಲ್ಲಿ 27,218 ಮದ್ಯದ ಪೆಟ್ಟಿಗೆಗಳನ್ನು ಸಾಗಿಸಲಾಗಿದೆ ಎಂದು ಅಬಕಾರಿ ನಿರೀಕ್ಷಕಿ ಎಸ್.ಬಿ.ಮಮತಾ ವರದಿಯಲ್ಲಿ ಸವಿವರವಾಗಿ ತಿಳಿಸಿದ್ದಾರೆ.


