https://youtu.be/NHc6OMSu0K4?si=SI_K4goOPEgwo6h2

ಹೊಸಪೇಟೆ: ನಗರದ ಪ್ರಸಿದ್ಧ ಉದ್ಯಮಿ ಹಾಗೂ ಸಮಾಜ ಸೇವಕ ಕೆ.ರವಿಶಂಕರ್ ಅವರ ಜನ್ಮದಿನದ ಅಂಗವಾಗಿ ಇಲ್ಲಿನ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಬ್ರೆಡ್, ಹಣ್ಣು ಹಾಗೂ ಹಾಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಜನ್ಮದಿನವನ್ನು ಆಚರಿಸಲಾಯಿತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಮಾರು 100ಕ್ಕೂ ಹೆಚ್ಚು ತಾಯಂದಿರು ಮತ್ತು ಮಕ್ಕಳಿಗೆ ವೈಯಕ್ತಿಕವಾಗಿ ಪೌಷ್ಟಿಕಾಹಾರದ ಕಿಟ್‌ಗಳನ್ನು ವಿತರಿಸಿ, ಅವರ ಆರೋಗ್ಯ ವಿಚಾರಿಸಲಾಯಿತು. ಕೇವಲ ಆಡಂಬರದ ಆಚರಣೆಗಳಿಗೆ ಸೀಮಿತವಾಗದೆ, ಆಸ್ಪತ್ರೆಯ ರೋಗಿಗಳಿಗೆ ನೆರವಾಗುವ ಮೂಲಕ ಕೆ.ರವಿಶಂಕರ್ ಅವರು ತಮ್ಮ ಹುಟ್ಟಿದ ದಿನವನ್ನು ಸಮಾಜಮುಖಿ ಕಾರ್ಯಕ್ಕೆ ಮುಡುಪಾಗಿಟ್ಟರು.
ಕ್ಷಯರೋಗಿಗಳಿಗೆ ನೆರವಾದ ಮಾನವೀಯತೆ: ಸದಾ ನಿಸ್ವಾರ್ಥ ಸೇವಾ ಮನೋಭಾವನೆ ಹೊಂದಿರುವ ಕೆ.ರವಿಶಂಕರ್ ಅವರು, ಕ್ಷಯರೋಗದಿಂದ (ಟಿ.ಬಿ) ಬಳಲುತ್ತಿದ್ದ ಸುಮಾರು 12 ಜನರನ್ನು ದತ್ತು ಪಡೆದು, ಆರು ತಿಂಗಳ ಕಾಲ ಅವರಿಗೆ ಸತತವಾಗಿ ಪೌಷ್ಟಿಕಾಹಾರವನ್ನು ನೀಡಿ, ಅವರು ಸಂಪೂರ್ಣವಾಗಿ ಗುಣಮುಖರಾಗಲು ಸಹಾಯ ಹಸ್ತ ಚಾಚಿದ್ದಾರೆ. ಇವರ ಈ ಮಾನವೀಯ ಕಾರ್ಯವು ಇಡೀ ಸಮಾಜಕ್ಕೆ ಮಾದರಿಯಾಗಿದೆ ಎಂದು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಡಿಎಚ್‌ಒ) ಡಾ. ಎಲ್.ಆರ್.ಶಂಕರನಾಯ್ಕ, ಆರೋಗ್ಯ ಇಲಾಖೆಯ ಎಂ.ಧರ್ಮನಗೌಡ ಸೇರಿದಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಶುಶ್ರೂಷಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಉದ್ಯಮಿ ಕೆ.ರವಿಶಂಕರ್ ಅವರಿಗೆ ಜನ್ಮದಿನದ ಶುಭಾಶಯ ಕೋರಿ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರು.




More Stories
ಸೋಷಿಯಲ್ ಮೀಡಿಯಾ: ಕಣ್ಣಿಗೆ ಆಕರ್ಷಕ, ಮನಸ್ಸಿಗೆ ಮಾರಕ!
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್, ಕೋಟ್ಯಂತರ ರೂಪಾಯಿ ರಾಜಸ್ವ ಸಂಗ್ರಹ : ಅಬಕಾರಿ ನಿರೀಕ್ಷಕಿ ಎಸ್.ಬಿ.ಮಮತಾ
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ನಿಲ್ಲಿಸಿ: ಕೇಂದ್ರ ಸರ್ಕಾರದ ವಿರುದ್ಧ ಅಶೋಕ್ ಭೀಮನಾಯ್ಕ ಆಕ್ರೋಶ