
ಮೂರು ರಾಜ್ಯಗಳ ಸಿಎಂ ಸಮಾಗಮ
ಹಂಪಿ ಟೈಮ್ಸ್ ಹೊಸಪೇಟೆ
ಕಲ್ಯಾಣ ಕರ್ನಾಟಕದ ರೈತರ ಪಾಲಿನ ಜೀವನಾಡಿ, ಲಕ್ಷಾಂತರ ಎಕರೆ ಕೃಷಿ ಭೂಮಿಗೆ ಜಲಧಾರೆ ನೀಡುವ ತುಂಗಭದ್ರಾ ಜಲಾಶಯವು ಇದೀಗ ನೂತನ ಕ್ರೆಸ್ಟ್‌ಗೇಟ್‌ಗಳೊಂದಿಗೆ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಕಳೆದ ವರ್ಷ ಸಂಭವಿಸಿದ ತಾಂತ್ರಿಕ ದೋಷದಿಂದ ರೈತರು ಆತಂಕಕ್ಕೀಡಾಗಿದ್ದರು. ಸರ್ಕಾರ ಯುದ್ಧೋಪಾದಿಯಲ್ಲಿ ಕೈಗೊಂಡಿದ್ದ 33 ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, ಇಂದು (ಜೂನ್ 25) ಅದ್ಧೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ.


ಈ ಸಮಾರಂಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ತೆಲಂಗಾಣದ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಹಾಗೂ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರು ಒಟ್ಟಾಗಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ಈ ಮೂಲಕ ಮೂರು ರಾಜ್ಯಗಳ ನಡುವಿನ ಜಲ ಸಹಕಾರ ಮತ್ತು ಸಂಸ್ಕೃತಿಯ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಾಗಿದೆ. ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾದ ಈ ಅತ್ಯಾಧುನಿಕ ತಂತ್ರಜ್ಞಾನದ ಗೇಟ್‌ಗಳು ಮುಂದಿನ ದಶಕಗಳ ಕಾಲ ಜಲಾಶಯದ ಭದ್ರತೆಯನ್ನು ಖಾತ್ರಿಪಡಿಸಲಿವೆ.



More Stories
ರಾಜ್ಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಹೊಸಪೇಟೆಯ ಪಿ.ಎಂ. ಶ್ರೀವರ್ಧನ್ ರೆಡ್ಡಿಗೆ ಪ್ರಥಮ ಸ್ಥಾನ
ಕ್ರೀಡೆಗಳು ಬಂದಿಗಳಲ್ಲಿ ಮಾನಸಿಕ ಉಲ್ಲಾಸ, ಸಕಾರಾತ್ಮಕ ಬದಲಾವಣೆ ತರಲು ಸಹಕಾರಿ: ಮಧುಸೂದನ್
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹೊಸಪೇಟೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ