
ಪ್ರಕೃತಿ ವಿಕೋಪ ನಿರ್ವಹಣೆಗೆ ಹೊಸ ಜವಾಬ್ದಾರಿ: ಸಚಿವರ ನೇಮಕ ಮಾಡಿ ರಾಜ್ಯ ಸರ್ಕಾರದಿಂದ ಅಧಿಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ಮತ್ತು ತಕ್ಷಣದ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು, ರಾಜ್ಯ ಸರ್ಕಾರವು ಪ್ರಮುಖ ನಿರ್ಧಾರ ಕೈಗೊಂಡಿದೆ. ಈ ಕುರಿತಾಗಿ ಜಿಲ್ಲಾವಾರು ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ರಾಜ್ಯದಲ್ಲಿ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಇನ್ನಷ್ಟು ಚುರುಕುಗೊಳಿಸುವ ಉದ್ದೇಶದಿಂದ, ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ. ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಈ ಸಚಿವರು ತಮ್ಮಗೆ ಹಂಚಿಕೆಯಾದ ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ವಹಿಸಿಕೊಳ್ಳಲಿದ್ದಾರೆ.
ನೇಮಕಗೊಂಡ ಸಚಿವರು ಮತ್ತು ಅವರಿಗೆ ಹಂಚಿಕೆಯಾದ ಜಿಲ್ಲೆಗಳ ವಿವರ:
-
ಡಾ. ಜಿ. ಪರಮೇಶ್ವರ: ತುಮಕೂರು ಮತ್ತು ಚಿತ್ರದುರ್ಗ
-
ಶ್ರೀ ಕೆ.ಹೆಚ್. ಮುನಿಯಪ್ಪ: ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ
-
ಶ್ರೀ ರಾಮಲಿಂಗರೆಡ್ಡಿ: ಬೆಂಗಳೂರು ದಕ್ಷಿಣ ಮತ್ತು ಮಂಡ್ಯ
-
ಶ್ರೀ ಎಂ.ಬಿ. ಪಾಟೀಲ್: ವಿಜಯಪುರ ಮತ್ತು ಬಾಗಲಕೋಟೆ
-
ಶ್ರೀ ಕೆ.ಜೆ. ಜಾರ್ಜ್: ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ
-
ಶ್ರೀ ಕೃಷ್ಣ ಭೈರೇಗೌಡ: ಬೆಂಗಳೂರು ನಗರ ಮತ್ತು ಹಾಸನ

-
ಶ್ರೀ ಈಶ್ವರ್ ಖಂಡ್ರೆ: ಬೀದರ್ ಮತ್ತು ಗದಗ
-
ಶ್ರೀ ಸತೀಶ್ ಜಾರಕಿಹೋಳಿ: ಬೆಳಗಾವಿ, ಧಾರವಾಡ ಮತ್ತು ಹಾವೇರಿ
-
ಶ್ರೀ ಪ್ರಿಯಾಂಕ್ ಖರ್ಗೆ: ಕಲಬುರ್ಗಿ ಮತ್ತು ಯಾದಗಿರಿ
-
ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್: ರಾಯಚೂರು ಮತ್ತು ಕೊಪ್ಪಳ
-
ಶ್ರೀ ಯು.ಟಿ. ಖಾದರ್ ಫರೀದ್: ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ
-
ಶ್ರೀ ಭೈರತಿ ಸುರೇಶ್: ಕೋಲಾರ ಮತ್ತು ಚಿಕ್ಕಬಳ್ಳಾಪುರ
-
ಡಾ. ಯತೀಂದ್ರ ಸಿದ್ದರಾಮಯ್ಯ: ಮೈಸೂರು ಮತ್ತು ಚಾಮರಾಜನಗರ
ಈ ನೇಮಕಾತಿಯು ಮುಖ್ಯಮಂತ್ರಿಯವರ ಅನುಮೋದನೆ ಪಡೆದಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿ ಎಸ್. ಶ್ರೀನಿವಾಸ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.


More Stories
ರಾಜ್ಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಹೊಸಪೇಟೆಯ ಪಿ.ಎಂ. ಶ್ರೀವರ್ಧನ್ ರೆಡ್ಡಿಗೆ ಪ್ರಥಮ ಸ್ಥಾನ
ಕ್ರೀಡೆಗಳು ಬಂದಿಗಳಲ್ಲಿ ಮಾನಸಿಕ ಉಲ್ಲಾಸ, ಸಕಾರಾತ್ಮಕ ಬದಲಾವಣೆ ತರಲು ಸಹಕಾರಿ: ಮಧುಸೂದನ್
ಮೈಸೂರು ಚಾಮುಂಡೇಶ್ವರಿ ಕ್ಷೇತ್ರವು ಶಕ್ತಿಯ ಕೇಂದ್ರ: ಕೊಪ್ಪಳ ಗವಿಶ್ರೀಗಳು