
ಹಂಪಿಯ ಸಂರಕ್ಷಿತ ವಲಯದಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ, ಹೋಮ್‌ಸ್ಟೇ: ಹಂಪಿ ಪ್ರಾಧಿಕಾರ, ತಹಶೀಲ್ದಾರ್ ಹಾಗೂ ಪಿಡಿಒಗಳ ವಿರುದ್ಧ ಉಪಲೋಕಾಯುಕ್ತ ಬಿ.ವೀರಪ್ಪ ಅವರಿಂದ ಸ್ವಯಂ ಪ್ರೇರಿತ ದೂರು ದಾಖಲು

ಹಂಪಿ ಟೈಮ್ಸ್ ಹೊಸಪೇಟೆ
ವಿಶ್ವ ಪಾರಂಪರಿಕ ತಾಣವಾಗಿರುವ ಹಂಪಿ ವ್ಯಾಪ್ತಿಯ ಕೋರ್ ಝೋನ್, ಬಫರ್ ಝೋನ್ ಹಾಗೂ ಪರಿಧಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ, ಅಕ್ರಮವಾಗಿ ವಾಣಿಜ್ಯ ಚಟುವಟಿಕೆಗಳು ಹಾಗೂ ಹೋಮ್‌ಸ್ಟೇ ನಡೆಸಲು ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಮಾನ್ಯ ಉಪಲೋಕಾಯುಕ್ತರಾದ ನ್ಯಾ. ಬಿ. ವೀರಪ್ಪ ಅವರು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದ್ದಾರೆ.
ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ ನಿಯಮಾವಳಿಗಳು ಹಾಗೂ ಮಾರ್ಗದರ್ಶಿ ಸೂತ್ರಗಳನ್ನು ಗಾಳಿಗೆ ತೂರಿ ನಿಷೇಧಿತ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ನೋಟಿಸ್ ಜಾರಿಯಾದ ಅಧಿಕಾರಿಗಳು:
ಈ ಪ್ರಕ್ರಿಯೆಯಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆನ್ನಲಾದ ಹೊಸಪೇಟೆ ಮತ್ತು ಕೊಪ್ಪಳ ಅಧಿಕಾರಿಗಳಿಗೆ ವಿವರಣೆ ಕೋರಿ ನೋಟಿಸ್ ನೀಡಲಾಗಿದೆ:
ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು, ಸಹಾಯಕ ಆಯುಕ್ತರು, ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಹೊಸಪೇಟೆ ಮತ್ತು ಕೊಪ್ಪಳ ವ್ಯಾಪ್ತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು.
ಯುನೆಸ್ಕೋ ನಿಯಮಾವಳಿ ಪ್ರಕಾರ ಹಂಪಿಯ ಸಾಂಸ್ಕೃತಿಕ ಹಾಗೂ ಪಾರಂಪರಿಕ ಪ್ರಾಮುಖ್ಯತೆಯನ್ನು ಕಾಯ್ದುಕೊಳ್ಳಲು ‘ಕೋರ್ ಝೋನ್’ ಮತ್ತು ‘ಬಫರ್ ಝೋನ್’ಗಳಲ್ಲಿ ಯಾವುದೇ ಮಾದರಿಯ ಅನಧಿಕೃತ ವಾಣಿಜ್ಯ ನಿರ್ಮಾಣಗಳು, ರೆಸಾರ್ಟ್‌ಗಳು ಅಥವಾ ಹೋಮ್‌ಸ್ಟೇಗಳನ್ನು ನಡೆಸುವಂತಿಲ್ಲ. ಆದಾಗ್ಯೂ, ಸಂಬಂಧಪಟ್ಟ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಇಂತಹ ಚಟುವಟಿಕೆಗಳನ್ನು ತಡೆಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಹಾಗೂ ಕೆಲವೆಡೆ ನಿಯಮ ಬಾಹಿರವಾಗಿ ಸಮ್ಮತಿ ನೀಡಿದ್ದಾರೆ ಎಂಬ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಮಾನ್ಯ ಉಪಲೋಕಾಯುಕ್ತರು ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ.


More Stories
ಸಿನಿಮಾಗಳ ಮೂಲಕ ಸಾಮಾಜಿಕ ವಾಸ್ತವಗಳ ಅನಾವರಣ: ಡಾ. ವೆಂಕಟಗಿರಿ ದಳವಾಯಿ
ರಾಜ್ಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಹೊಸಪೇಟೆಯ ಪಿ.ಎಂ. ಶ್ರೀವರ್ಧನ್ ರೆಡ್ಡಿಗೆ ಪ್ರಥಮ ಸ್ಥಾನ
ಕ್ರೀಡೆಗಳು ಬಂದಿಗಳಲ್ಲಿ ಮಾನಸಿಕ ಉಲ್ಲಾಸ, ಸಕಾರಾತ್ಮಕ ಬದಲಾವಣೆ ತರಲು ಸಹಕಾರಿ: ಮಧುಸೂದನ್