August 13, 2026

Hampi times

Kannada News Portal from Vijayanagara

ದೇಶದ ಶೇ. 56 ಜನರಲ್ಲಿ ರಕ್ತಹೀನತೆಯ ಭೀತಿ, ಕುಂಠಿತಗೊಳ್ಳುತ್ತಿದೆ ಮಕ್ಕಳ ಜ್ಞಾಪಕ ಶಕ್ತಿ : ಡಿಎಚ್‌ಒ ಟಿ ಲಿಂಗರಾಜು

https://youtu.be/NHc6OMSu0K4?si=SI_K4goOPEgwo6h2

 

ಹಂಪಿ ಟೈಮ್ಸ್‌ ಹೊಸಪೇಟೆ

ಜಂತುಹುಳುಗಳ ಬಾಧೆಯಿಂದ ಮಕ್ಕಳಲ್ಲಿ ಉಂಟಾಗುವ ಅಪೌಷ್ಟಿಕತೆ ಹಾಗೂ ರಕ್ತಹೀನತೆಯನ್ನು ತಡೆಗಟ್ಟಿ, ಅವರ ದೈಹಿಕ ಬೆಳವಣಿಗೆ ಮತ್ತು ಜ್ಞಾಪಕ ಶಕ್ತಿಯನ್ನು ವೃದ್ಧಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಲಿಂಗರಾಜು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ಸಹಯೋಗದಲ್ಲಿ ನಗರದ ಅಮರಾವತಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

 

 

 

ದೇಶದಲ್ಲಿ ಶೇ.56ರಷ್ಟು ಜನರಲ್ಲಿ ರಕ್ತಹೀನತೆ ಕಂಡುಬರುತ್ತಿದ್ದು, ಮಹಿಳೆಯರು ಹಾಗೂ ಮಕ್ಕಳಲ್ಲಿ ಇದರ ಪ್ರಮಾಣ ಹೆಚ್ಚಾಗಿದೆ. ಆದ್ದರಿಂದ ಪರಿಸರ ಸ್ವಚ್ಛತೆ, ಬಿಸಿ ಆಹಾರ ಸೇವನೆ, ಶೌಚಾಲಯ ಬಳಕೆಯ ನಂತರ ಕೈ ತೊಳೆಯುವುದು ಹಾಗೂ ಬರಿಗಾಲಿನಲ್ಲಿ ಓಡಾಡದಿರುವುದು ಅತ್ಯಗತ್ಯ. ಜಿಲ್ಲೆಯ 1,583 ಅಂಗನವಾಡಿ ಕೇಂದ್ರಗಳು, 1,203 ಸರ್ಕಾರಿ ಶಾಲೆಗಳು ಹಾಗೂ 406 ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1ರಿಂದ 19 ವರ್ಷದೊಳಗಿನ ಒಟ್ಟು 4,44,094 ಮಕ್ಕಳಿಗೆ ಅಲ್ಬೆಂಡಜೋಲ್ ಮಾತ್ರೆಗಳನ್ನು ನೀಡುವ ಗುರಿ ಹೊಂದಲಾಗಿದ್ದು, ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಂಡು ಜಿಲ್ಲೆಯನ್ನು ಜಂತುಹುಳು ಮುಕ್ತವಾಗಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಮರಾವತಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಜೀವ್ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ನಾಗರಾಜ್ ಹವಲ್ದಾರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ರಾಧಿಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಗಂಗಪ್ಪ, ಅಮರಾವತಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಪ್ರಾಂಶುಪಾಲ ವೆಂಕಟೇಶ್, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Please follow and like us:

 

 

 

 

 

 

 

 

Translate »
[t4b-ticker]
error: Content is protected !!