October 13, 2026

Hampi times

Kannada News Portal from Vijayanagara

4.07 ಕೋಟಿ ರೂಪಾಯಿ ವೆಚ್ಚದ ಜಲಸಂಗ್ರಹ ಟ್ಯಾಂಕ್‌ ಕಾಮಗಾರಿಗೆ ಶಾಸಕ ಗವಿಯಪ್ಪರಿಂದ ಭೂಮಿ ಪೂಜೆ ನೆರವೇರಿಕೆ

  • ನಗರದ ಎಲ್ಲ ಬಡಾವಣೆಗಳಿಗೆ ಸಮರ್ಪಕ ನೀರು ಪೂರೈಕೆಗೆ ಆದ್ಯತೆ

  • ಸ್ಥಳೀಯ ನಾಗರಿಕರ ಬೇಡಿಕೆಗೆ ಶಾಸಕರಿಂದ ತ್ವರಿತ ಸ್ಪಂದನೆ

  • ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

  • ಈಶ್ವರನಗರ ಕಾಮಗಾರಿ ಭೂಮಿಪೂಜೆಗೆ ಸಚಿವರನ್ನು ಆಹ್ವಾನಿಸಲು ತೀರ್ಮಾನ

ಹೊಸಪೇಟೆ: ನಗರದ ಬಾಲಾಜಿನಗರ ಹಾಗೂ ಸುತ್ತಮುತ್ತಲಿನ ನಿವಾಸಿಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ನಗರೋತ್ಥಾನ ಯೋಜನೆಯಡಿ 4.07 ಕೋಟಿ ರೂಪಾಯಿ ವೆಚ್ಚದಲ್ಲಿ 10 ಲಕ್ಷ ಲೀಟರ್ ಸಾಮರ್ಥ್ಯದ ನೂತನ ಜಲಸಂಗ್ರಹ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಾಸಕ ಎಚ್.ಆರ್.ಗವಿಯಪ್ಪ  ಭಾನುವಾರ ಭೂಮಿಪೂಜೆ ನೆರವೇರಿಸಿದರು.

ನಗರದ ಬಾಲಾಜಿನಗರದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಶಾಸಕ ಎಚ್.ಆರ್. ಗವಿಯಪ್ಪ ಅವರು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಸ್ಥಳೀಯ ನಾಗರಿಕರ ಹಾಗೂ ಜನಪ್ರತಿನಿಧಿಗಳ ಮನವಿಗೆ ಸ್ಪಂದಿಸಿ ಈ ಯೋಜನೆಯನ್ನು ರೂಪಿಸಲಾಗಿದ್ದು, ಮುಂದಿನ ಒಂದು ವರ್ಷದ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ ಎಂದು ತಿಳಿಸಿದರು.

ಇದೇ ವೇಳೆ ಈಶ್ವರನಗರ ಭಾಗದಲ್ಲೂ ಮತ್ತೊಂದು ಜಲಸಂಗ್ರಹ ಟ್ಯಾಂಕ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಶೀಘ್ರದಲ್ಲೇ ದಿನಾಂಕ ನಿಗದಿಪಡಿಸಿ ಸಚಿವ ಬಸವಂತಪ್ಪ ಅವರ ಉಪಸ್ಥಿತಿಯಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಶಾಸಕರು ಹೇಳಿದರು.


ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರು ರೂಪೇಶ್‌ ಕುಮಾರ್‌,  ಯೋಜನಾ ನಿರ್ದೇಶಕ ಮನೋಹರ್, ಪೌರಾಯುಕ್ತ ಶಿವಕುಮಾರ, ನಗರಸಭೆ ಸದಸ್ಯರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Please follow and like us: