https://youtu.be/NHc6OMSu0K4?si=SI_K4goOPEgwo6h2
ಬಳ್ಳಾರಿ: ಪ್ರತಿಯೊಬ್ಬರೂ ತಮ್ಮ ಸ್ವಂತ ಮನೆಯ ಕನಸನ್ನು ನನಸು ಮಾಡಿಕೊಳ್ಳಲು ಸುಲಭ ಕಂತುಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕರು ಮುಂಗಡ ಹಣ ನೀಡಿ ನಿವೇಶನಗಳನ್ನು ಖರೀದಿಸಬಹುದು ಎಂದು ಕೊರವಿ ಡೆವಲಪರ್ಸ್ ಆ್ಯಂಡ್ ಬಿಲ್ಡರ್ಸ್ ಸಂಸ್ಥೆಯ ಮಾಲೀಕರಾದ ಶಶಿಧರ್ ಕೊರವಿ ತಿಳಿಸಿದರು.
ನಗರ ಸಮೀಪದ ಮಿಂಚೇರಿ ಹಾಗೂ ಬೆಂಗಳೂರು ಬೈಪಾಸ್ ರಸ್ತೆ ಬಳಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಕೊರವಿ ಸನ್‌ಶೈನ್’ ವಾಣಿಜ್ಯ ಮತ್ತು ವಸತಿ ನಿವೇಶನಗಳ ಭೂಮಿಪೂಜಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹೆಚ್ಚಿನ ಮಾಹಿತಿಗೆ ಬಳ್ಳಾರಿಯಲ್ಲಿರುವ ಸಂಸ್ಥೆಯ ಕಚೇರಿಗೆ ಭೇಟಿ ನೀಡಿ ನಿವೇಶನಗಳನ್ನು ಕಾಯ್ದಿರಿಸಬಹುದು ಎಂದು ಅವರು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ ಮಾತನಾಡಿ, “ಕೊರವಿ ಸನ್‌ಶೈನ್ ಯೋಜನೆಯನ್ನು ಎಲ್ಲಾ ವರ್ಗದವರಿಗೂ ಕೈಗೆಟುಕುವ ದರದಲ್ಲಿ ವಿನ್ಯಾಸಗೊಳಿಸಲಾಗಿದೆ. ಈಜುಕೊಳ, 30 ಅಡಿ ರಸ್ತೆ, ಸುಸಜ್ಜಿತ ವಿದ್ಯುತ್, ಒಳಚರಂಡಿ ಮತ್ತು ಉದ್ಯಾನವನ ಸೇರಿದಂತೆ ಸಕಲ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ,” ಎಂದರು.
ಕಾರ್ಯಕ್ರಮದಲ್ಲಿ ಎಮ್ಮಿಗನೂರು ಶ್ರೀ ಗುರು ಮಹಾಂತ ಶ್ರೀಮಠದ ಶ್ರೀ ಗುರು ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮೀಜಿ, ಕಮ್ಮಜೆಡು ಕಲ್ಯಾಣ ಸ್ವಾಮಿ ಮಠದ ಶ್ರೀ ಕಲ್ಯಾಣ ಸ್ವಾಮೀಜಿ ಹಾಗೂ ಹರಗಿನಡೋಣಿ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಸಂಸ್ಥೆಯ ಪಾಲುದಾರರಾದ ವಿಶ್ವನಾಥ್ ಕೊರವಿ, ಡಿ. ಹಿರೇಹಾಳ್ ಶೆಟ್ರು ಕುಟುಂಬಸ್ಥರು, ಅನ್ನಪೂರ್ಣ ಮೋಟಾರ್ಸ್‌ನ ಚಿತ್ತರಕಿ ಪಂಚಪ್ಪನವರು, ನಾಗಳ್ಳಿ ವೆಂಕಟೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ನಂತರ ಗಂಗಾವತಿ ಪ್ರಾಣೇಶ್ ಹಾಗೂ ನರಸಿಂಹ ಜೋಶಿ ಅವರ ತಂಡದಿಂದ ನಡೆದ ‘ನಗೆ ಹಬ್ಬ’ ಕಾರ್ಯಕ್ರಮವು ನೆರೆದಿದ್ದವರನ್ನು ನಗೆಗಡಲಲ್ಲಿ ತೇಲಿಸಿತು.




More Stories
ನನ್ನನ್ನು ನಾಡಿನ ದೊರೆ ಎನ್ನಬೇಡಿ, ಪ್ರಜಾಸೇವಕ ಎನ್ನಿ: ಸಿಎಂ ಡಿ.ಕೆ.ಶಿವಕುಮಾರ್
ಕೂಡ್ಲಿಗಿಯಲ್ಲಿ ಖುದ್ದು ಅಹವಾಲು ಸ್ವೀಕರಿಸಿದ ಸಿಎಂ ಡಿ ಕೆ ಶಿವಕುಮಾರ್
ಕೂಡ್ಲಿಗಿ, ಕೊಟ್ಟೂರು ತಾಲೂಕುಗಳನ್ನು ‘ಬರಪೀಡಿತ’ ಎಂದು ಘೋಷಿಸಲು ಶಾಸಕ ಎನ್.ಟಿ.ಶ್ರೀನಿವಾಸ್ ಆಗ್ರಹ