November 22, 2026

Hampi times

Kannada News Portal from Vijayanagara

ಮೈಸೂರಿನಲ್ಲಿ ಸೆಪ್ಟೆಂಬರ್ 19ರಂದು 20ನೇ ‘ರಾಷ್ಟ್ರೀಯ ಉದ್ಯೋಗ ಮೇಳ

ಮೈಸೂರು: ದೇಶದ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಹಾಗೂ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಮಾನವ ಸಂಪನ್ಮೂಲವನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ 20ನೇ ಆವೃತ್ತಿಯ ‘ರಾಷ್ಟ್ರೀಯ ಉದ್ಯೋಗ ಮೇಳ’ವು ಸೆಪ್ಟೆಂಬರ್ 19ರಂದು ಮೈಸೂರಿನಲ್ಲಿ ನಡೆಯಲಿದೆ.

ಮೈಸೂರಿನ ಬೋಗಾದಿ ರಸ್ತೆಯ ನೈಮಿಷಂ ಆವರಣದಲ್ಲಿರುವ ‘ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ’ಯಲ್ಲಿ (ಆಯಿಷ್) ಬೆಳಿಗ್ಗೆ 10:30ಕ್ಕೆ ಆಯೋಜಿಸಲಾಗಿರುವ ಈ ಸಮಾರಂಭವನ್ನು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ. ಇದೇ ವೇಳೆ ವಿವಿಧ ಇಲಾಖೆಗಳಿಗೆ ನೂತನವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಸಚಿವರು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ (ವಿಡಿಯೋ ಕಾನ್ಫರೆನ್ಸ್) ಮೂಲಕ ಭಾಗವಹಿಸಿ, ನೂತನವಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನುದ್ದೇಶಿಸಿ ಮಾರ್ಗದರ್ಶನ ನೀಡಲಿದ್ದಾರೆ. ಯುವ ಸಬಲೀಕರಣ, ಉದ್ಯೋಗ ಸೃಷ್ಟಿ ಮತ್ತು ನವ ಯುವಕರನ್ನು ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ರಾಷ್ಟ್ರೀಯ ಉದ್ಯೋಗ ಮೇಳವು ಪ್ರಮುಖ ವೇದಿಕೆಯಾಗಿದ್ದು, ಮೈಸೂರಿನಲ್ಲಿ ನಡೆಯಲಿರುವ ಈ ಮೇಳದಲ್ಲಿ ಬೃಹತ್ ಸಂಖ್ಯೆಯ ನವ ಉದ್ಯೋಗಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Please follow and like us:

 

 

 

 

 

 

 

 

 

 

Translate »